Categories: Featured-Article

Shivamogga | ನಿಷ್ಪಕ್ಷಪಾತ ಮತ್ತು ಪಾರದರ್ಶಕತೆಯಿಂದ ಯಶಸ್ವಿಯಾಗಿ ಚುನಾವಣಾ ಕರ್ತವ್ಯ ನಿರ್ವಹಿಸೋಣ ; ಡಿಸಿ ಗುರುದತ್ತ ಹೆಗಡೆ

ಶಿವಮೊಗ್ಗ : ಮುಂಬರುವ ಲೋಕಸಭಾ ಚುನಾವಣೆಯನ್ನು ಎಲ್ಲರೂ ಒಂದು ತಂಡವಾಗಿ ನಿಷ್ಪಕ್ಷಪಾತ, ಪಾರದರ್ಶಕತೆ ಮತ್ತು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವ ಮೂಲಕ ಯಶಸ್ವಿಗೊಳಿಸೋಣ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಚುನಾವಣಾಧಿಕಾರಿಗಳಿಗೆ ತಿಳಿಸಿದರು.

ಇಂದು ಅಂಬೇಡ್ಕರ್ ಭವನದಲ್ಲಿ ಎಫ್‍ಎಸ್‍ಟಿ, ಎಸ್‍ಎಸ್‍ಟಿ, ವಿವಿಟಿ, ಇಇಓ, ವಿಎಸ್‍ಟಿ ಚುನಾವಣಾ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳಿಗೆ ಏರ್ಪಡಿಸಲಾಗಿದ್ದ ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿ, ಚುನಾವಣೆಗಳನ್ನು ನಡೆಸುವ ಅವಕಾಶ ಎಲ್ಲರಿಗೂ ಲಭಿಸುವುದಿಲ್ಲ. ಸರ್ಕಾರಿ ಅಧಿಕಾರಿ/ನೌಕರರಾದ ನಮಗೆ ಈ ಸದವಕಾಶ ಲಭಿಸಿದ್ದು, ಇದನ್ನು ದೇವರ ಕೆಲಸವೆಂದು ಎಲ್ಲರೂ ಅತ್ಯಂತ ನಿಷ್ಪಕ್ಷವಾಗಿ ಮತ್ತು ಪಾರದರ್ಶಕವಾಗಿ ನಿರ್ವಹಿಸೋಣವೆಂದು ಕರೆ ನೀಡಿದರು.

ಎಫ್‍ಎಸ್‍ಟಿ, ಎಸ್‍ಎಸ್‍ಟಿ, ವಿವಿಟಿ, ಇಇಓ, ವಿಎಸ್‍ಟಿ ಯಾವುದೇ ತಂಡಗಳು ತಮ್ಮ ಕರ್ತವ್ಯಕ್ಕೆ ಸರಿಯಾದ ಸಮಯಕ್ಕೆ ಹಾಜರಾಗಬೇಕು. ವಾಹನಗಳು ಸೇರಿದಂತೆ ಕರ್ತವ್ಯದಲ್ಲಿ ಆದಷ್ಟು ಹೆಚ್ಚಾಗಿ ತಂತ್ರಜ್ಞಾನ ಬಳಕೆ ಮಾಡಿಕೊಳ್ಳಲಾಗುವುದು. ಯಾವುದೇ ರೀತಿಯ ನಿರ್ಲಕ್ಷ್ಯವನ್ನು ಗಂಭೀರವಾಗಿ ಪರಿಗಣಿಸಲಾಗುವುದು.

ತಾವು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿ.ಪಂ ಸಿಇಓ ಯವರೊಂದಿಗೆ ಖುದ್ದಾಗಿ ಎಲ್ಲ ಚೆಕ್‍ಪೋಸ್ಟ್‍ಗಳಿಗೆ ಭೇಟಿ ನೀಡುವೆವು. ಚುನಾವಣಾ ಸಮಯದಲ್ಲಿ ಚೆಕ್‍ಪೋಸ್ಟ್‍ಗಳಲ್ಲಿ ಸ್ವಲ್ಪ ಟ್ರಾಫಿಕ್ ಸಮಸ್ಯೆಯಾಗುತ್ತದೆ. ಅದನ್ನು ನಿರ್ವಹಿಸಬೇಕು. ಚೆಕ್‌ ಪೋಸ್ಟ್ ಗಳಲ್ಲಿ ಬಸ್‍ಗಳನ್ನು ಸಹ ತಪಾಸಣೆ ಮಾಡಬೇಕು ಎಂದರು.

ತಹಶೀಲ್ದಾರರು ತಮ್ಮ ತಮ್ಮ ಚುನಾವಣಾ ಅಧಿಕಾರಿ/ಸಿಬ್ಬಂದಿಗಳನ್ನು ತಮ್ಮ ಮಕ್ಕಳಂತೆ ನೋಡಿಕೊಳ್ಳಬೇಕು. ತಂಡವಾಗಿ ಉತ್ತಮ ಕಾರ್ಯನಿರ್ವಹಿಸಲು ಪ್ರೇರೇಪಿಸಬೇಕು. ಕ್ಷೇತ್ರದಲ್ಲಿ ಅಥವಾ ಯಾವುದೇ ರೀತಿಯಲ್ಲಿ ಅವರಿಗೆ ಸಮಸ್ಯೆಗಳು ಎದುರಾದಲ್ಲಿ ಶೀಘ್ರವಾಗಿ ಮತ್ತು ಸಮರ್ಪಕವಾಗಿ ನಿರ್ವಹಿಸಬೇಕು ಎದು ಸೂಚಿಸಿದ ಅವರು ಸಾಕಷ್ಟು ಸೇವಾನುಭವವುಳ್ಳವರನ್ನೇ ಎಂಸಿಸಿ ಇತರೆ ತಂಡಗಳಿಗೆ ನೇಮಕ ಮಾಡಲಾಗಿದೆ ಎಂದರು.

ಯಾವುದೇ ಕಾರಣಕ್ಕೂ ತಮ್ಮ ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸುವುದನ್ನು ಸಹಿಸುವುದಿಲ್ಲ. ತಮ್ಮ ಜವಾಬ್ದಾರಿಯಿಂದ ಹಿಂಜರಿಯದೆ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಕೆಲಸ ನಿರ್ವಹಣೆ ವೇಳೆ ಮೂಲಭೂತ ಸೌಕರ್ಯ, ಭದ್ರತೆ ಸೇರಿದಂತೆ ಯಾವುದೇ ರೀತಿಯ ಸಮಸ್ಯೆಗಳಿದ್ದರೆ ಸಂಬಂಧಿಸಿದ ತಹಶೀಲ್ದಾರ್ ಅಥವಾ ತಮ್ಮ ಗಮನಕ್ಕೆ ತಂದಲ್ಲಿ ಸರಿಪಡಿಸುವುದಾಗಿ ತಿಳಿಸಿದರು.

ತಮ್ಮ ಚುನಾವಣಾ ಪಾತ್ರದ ಕರ್ತವ್ಯಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಗೊಂದಲಗಳು, ಸ್ಪಷ್ಟೀಕರಣಗಳಿದ್ದಲ್ಲಿ ತರಬೇತಿ ಕಾರ್ಯಕ್ರಮದಲ್ಲಿ ಮಾಸ್ಟರ್ ಟ್ರೈನರ್ ಬಳಿ ಕೇಳಿ ಸ್ಪಷ್ಟಪಡಿಸಿಕೊಳ್ಳುವಂತೆ ಸಲಹೆ ನೀಡಿದರು.

ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ, ಮಾಸ್ಟರ್ ಟ್ರೈನರ್ ಗಳಾದ ಶಿವಕುಮಾರ್, ರವಿಚಂದ್ರ ನಾಯ್ಕ್, ಹಾಜರಿದ್ದರು.

Malnad Times

Share
Published by
Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

9 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

13 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

14 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

16 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

16 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

24 hours ago