ರಿಪ್ಪನ್‌ಪೇಟೆ: ಆನಂದಪುರ ಮುರುಘಾರಾಜೇಂದ್ರ ಮಠದ ಜಗದ್ಗುರು ಡಾ. ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮೀಜಿಯವರ 75ನೇ ವರ್ಷದ ಅಮೃತ ಮಹೋತ್ಸವದ ಶುಭ ಸಂದರ್ಭದಲ್ಲಿ, ರಾಜ್ಯದ ಹಿರಿಯ ರಾಜಕೀಯ ಧುರೀಣ ಹಾಗೂ ಮಾಜಿ ಮುಖ್ಯಮಂತ್ರಿ ಡಾ. ಬಿ.ಎಸ್. ಯಡಿಯೂರಪ್ಪರಿಗೆ ಸೆಪ್ಟೆಂಬರ್ 27ರ ಭಾನುವಾರ ಬೆಳಿಗ್ಗೆ 11 ಗಂಟೆಗೆ ರಿಪ್ಪನ್‌ಪೇಟೆಯ ಶಿವಮಂದಿರದಲ್ಲಿ ಬಸವೇಶ್ವರ ವೀರಶೈವ ಸಮಾಜದ ವತಿಯಿಂದ ಅದ್ಧೂರಿ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈ ಕುರಿತು ವಿವರ ನೀಡಿದ ವೀರಶೈವ ಸಮಾಜದ ಉಪಾಧ್ಯಕ್ಷ ಜಿ.ಎಂ. ದುಂಡರಾಜಪ್ಪಗೌಡ ಹಾಗೂ ಕಾರ್ಯದರ್ಶಿ ಡಿ.ಎಸ್. ರಾಜಾಶಂಕರ್, ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಿದರು.
ಕಾರ್ಯಕ್ರಮದ ರೂಪುರೇಷೆ:
ದಿವ್ಯ ಸಾನಿಧ್ಯ: ಆನಂದಪುರ ಮುರುಘಾರಾಜೇಂದ್ರ ಮಠದ ಜಗದ್ಗುರು ಡಾ. ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮೀಜಿಯವರು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದಾರೆ.
ಉಪದೇಶಾಮೃತ: ಕೋಣಂದೂರು ಬೃಹನ್ಮಠದ ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹಾಗೂ ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಅಭಿನವ ಚನ್ನಬಸವ ಮಹಾಸ್ವಾಮೀಜಿ ಕಾರ್ಯಕ್ರಮದಲ್ಲಿ ಉಪದೇಶಾಮೃತ ನೀಡಲಿದ್ದಾರೆ.
ಉದ್ಘಾಟನೆ & ಅಧ್ಯಕ್ಷತೆ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದು, ಬಸವೇಶ್ವರ ವೀರಶೈವ ಸಮಾಜದ ಅಧ್ಯಕ್ಷ ಡಾ. ಕೆ.ಬಿ. ಕಮಲಾಕ್ಷಪ್ಪ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳು: ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಗೋಪಾಲಕೃಷ್ಣ ಬೇಳೂರು, ಮಾಜಿ ಸಚಿವ ಹರತಾಳು ಹಾಲಪ್ಪ, ಅಖಿಲ ಭಾರತ ವೀರಶೈವ ಸಮಾಜದ ತಾಲೂಕು ಅಧ್ಯಕ್ಷ ಎಂ.ಎಸ್. ಉಮೇಶ್ ಹಾಗೂ ಬಸವೇಶ್ವರ ವೀರಶೈವ ಸಮಾಜದ ಉಪಾಧ್ಯಕ್ಷರಾದ ಜಿ.ಎಂ. ದುಂಡರಾಜಪ್ಪಗೌಡ ಮತ್ತು ಎಂ.ಆರ್. ಶಾಂತವೀರಪ್ಪಗೌಡ ಪ್ರಮುಖ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಹೆಚ್.ಎಂ. ವರ್ತೇಶ್ ಹುಗುಡಿ, ಜೆ.ಎಂ. ಶಾಂತಕುಮಾರ್, ಬಿ.ವಿ. ನಾಗಭೂಷಣ, ಹೆಚ್.ಎಸ್. ರವಿ, ಕೆ.ವಿ. ಪರಮೇಶ್, ಬಿ.ಎಲ್. ಲಿಂಗಪ್ಪ, ಡಿ.ಟಿ. ಕುಮಾರಸ್ವಾಮಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

