ಶಿವಮೊಗ್ಗ : ಜಿಲ್ಲೆಯಲ್ಲಿ ಮೊದಲ ಕೊರೊನಾ (Covid-19) ಪ್ರಕರಣ ಪತ್ತೆಯಾಗಿದೆ.
75 ವರ್ಷದ ವೃದ್ಧನಿಗೆ ಕೊರೊನಾ ಪಾಸಿಟಿವ್ ಬಂದಿದೆ. ಹಾವೇರಿ ಜಿಲ್ಲೆಯ ವೃದ್ಧ ಮೇ 19 ರಂದು ಹೃದಯ ಸಂಬಂಧಿ ಕಾಯಿಲೆಯಿಂದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಏಳು ದಿನ ಚಿಕಿತ್ಸೆ ಪಡೆದಿದ್ದ ಅವರಿಗೆ ಕಫ ಇದ್ದ ಕಾರಣ ಕೊರೊನಾ ಟೆಸ್ಟ್ ಒಳಪಡಿಸಲಾಗಿತ್ತು. ಸೋಮವಾರ ವೃದ್ಧನಿಗೆ ಕೊರೊನಾ ಪಾಸಿಟಿವ್ ತಗುಲಿರುವುದು ದೃಢಪಟ್ಟಿದೆ.
ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆದಿದ್ದ ವೃದ್ಧ ಗುಣಮುಖರಾಗಿ ಆಸ್ಪತ್ರೆಯಿಂದ ಸೋಮವಾರವಷ್ಟೆ ಬಿಡುಗಡೆಗೊಂಡು ಮನೆಗೆ ಹೋಗಿದ್ದರು. ಆದರೆ ಅವರು ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆ ಸೇರಿದ ಬಳಿಕ ಕೊರೊನಾ ದೃಢಪಟ್ಟಿರುವುದ ಆತಂಕಕ್ಕೆ ಕಾರಣವಾಗಿದೆ.
ಈ ಬಗ್ಗೆ ಸ್ಪಷ್ಟಪಡಿಸಿರುವ ಡಿಎಸ್‌ಒ ಡಾ. ನಾಗರಾಜ ನಾಯ್ಕ, ವೃದ್ಧನಿಗೆ ಕೊರೊನಾ ತಗುಲಿರುವುದು ನಿಜ. ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆದು ಮನೆಗೆ ಮರಳಿದ ಬಳಿಕ ಸೋಂಕು ದೃಢಪಟ್ಟಿದೆ. ಹಾವೇರಿ ಜಿಲ್ಲೆಯ ಡಿಎಚ್‌ಒ ಅವರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.