ಶಿವಮೊಗ್ಗ

ಶಿವಮೊಗ್ಗದಲ್ಲಿ ಮೊದಲ ಕೊರೊನಾ ಪ್ರಕರಣ ಪತ್ತೆ !

ಶಿವಮೊಗ್ಗ : ಜಿಲ್ಲೆಯಲ್ಲಿ ಮೊದಲ ಕೊರೊನಾ (Covid-19) ಪ್ರಕರಣ ಪತ್ತೆಯಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

75 ವರ್ಷದ ವೃದ್ಧನಿಗೆ ಕೊರೊನಾ ಪಾಸಿಟಿವ್ ಬಂದಿದೆ. ಹಾವೇರಿ ಜಿಲ್ಲೆಯ ವೃದ್ಧ ಮೇ 19 ರಂದು ಹೃದಯ ಸಂಬಂಧಿ ಕಾಯಿಲೆಯಿಂದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಏಳು ದಿನ ಚಿಕಿತ್ಸೆ ಪಡೆದಿದ್ದ ಅವರಿಗೆ ಕಫ ಇದ್ದ ಕಾರಣ ಕೊರೊನಾ ಟೆಸ್ಟ್ ಒಳಪಡಿಸಲಾಗಿತ್ತು. ಸೋಮವಾರ ವೃದ್ಧನಿಗೆ ಕೊರೊನಾ ಪಾಸಿಟಿವ್‌ ತಗುಲಿರುವುದು ದೃಢಪಟ್ಟಿದೆ.

ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆದಿದ್ದ ವೃದ್ಧ ಗುಣಮುಖರಾಗಿ ಆಸ್ಪತ್ರೆಯಿಂದ ಸೋಮವಾರವಷ್ಟೆ ಬಿಡುಗಡೆಗೊಂಡು ಮನೆಗೆ ಹೋಗಿದ್ದರು. ಆದರೆ ಅವರು ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆ ಸೇರಿದ ಬಳಿಕ ಕೊರೊನಾ ದೃಢಪಟ್ಟಿರುವುದ ಆತಂಕಕ್ಕೆ ಕಾರಣವಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಈ ಬಗ್ಗೆ ಸ್ಪಷ್ಟಪಡಿಸಿರುವ ಡಿಎಸ್‌ಒ ಡಾ. ನಾಗರಾಜ ನಾಯ್ಕ, ವೃದ್ಧನಿಗೆ ಕೊರೊನಾ ತಗುಲಿರುವುದು ನಿಜ. ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆದು ಮನೆಗೆ ಮರಳಿದ ಬಳಿಕ ಸೋಂಕು ದೃಢಪಟ್ಟಿದೆ. ಹಾವೇರಿ ಜಿಲ್ಲೆಯ ಡಿಎಚ್‌ಒ ಅವರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>