ರಿಪ್ಪನ್‌ಪೇಟೆ ; ಮಹಿಳೆಯರು, ಸ್ವಸಹಾಯ ಸಂಘದ ಮಹಿಳೆಯರು ತಮ್ಮೂರಿನ ಕೆರೆಗಳಲ್ಲಿ ಮೀನು ಸಾಕಾಣಿಕೆ ಮಾಡುವ ಮೂಲಕ ಅರ್ಥಿಕವಾಗಿ ಸ್ವಾವಲಂಬನೆ ಹೊಂದಲು ಸಹಕಾರಿಯಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಬರುವೆ ಗ್ರಾಮದಲ್ಲಿನ ಗ್ರಾಮ ಪಂಚಾಯಿತ್ ಮಟ್ಟದ ಒಕ್ಕೂಟಗಳ ಹಾಗೂ ಸ್ವಸಹಾಯ ಸಂಘಗಳ ಸಂಯುಕ್ತಾಶ್ರಯದಲ್ಲಿ ಮೂರು ಕೆರೆಗಳಿಗೆ ಮೀನು ಮರಿಗಳ ಬಿತ್ತನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಹಿಳೆಯರು ಅಡುಗೆಗೆ ಸೀಮಿತವಾಗದೆ ಇತ್ತೀಚಿನ ದಿನಗಳಲ್ಲಿ ಯಾವುದೇ ಕ್ಷೇತ್ರಕ್ಕೂ ಸೈ ಎನ್ನಿಸಿಕೊಳ್ಳುವತ್ತ ಮುಂದಾಗಿದ್ದಾರೆ. ಒಕ್ಕೂಟದ ಮೂಲಕ ಮೀನು ಸಾಕಾಣಿಕೆಯಲ್ಲಿ ತೊಡಗಿರುವುದರೊಂದಿಗೆ ಸ್ವಾವಲಂಬನೆಯ ಬದುಕು ಕಟ್ಟಿಕೊಳ್ಳಲು ಮುಂದಾಗಿರುವುದರ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿ, ಇನ್ನೂ ಹೆಚ್ಚು ಇಂತಹ ಕಾರ್ಯದಲ್ಲಿ ಮುಂದಾಗಲು ಸಂಪೂರ್ಣ ಸಹಕಾರ ಕಲ್ಪಿಸುವುದಾಗಿ ಹೇಳಿ ಹೇಳಿದರು.
ಗ್ರಾಮ ಪಂಚಾಯಿತ್ ಅಧ್ಯಕ್ಷೆ ಧನಲಕ್ಷ್ಮಿ, ಮಹಿಳಾ ಒಕ್ಕೂಟದ ಅಧ್ಯಕ್ಷೆ ರಿನಾಸೈಜ್ ಗ್ರಾಮ ಪಂಚಾಯಿತ್ ಸದಸ್ಯರಾದ ನಿರೂಪ್ ಕುಮಾರ್, ಆಸಿಪ್ ಭಾಷಾ, ಗಣಪತಿ, ಅಶ್ವಿನಿ ರವಿಶಂಕರ್, ಪ್ರಕಾಶ ಪಾಲೇಕರ್, ಅನುಪಮ ರಾಕೇಶ್, ಪಿಡಿಒ ನಾಗರಾಜ್, ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು ಪಕ್ಷದ ಮುಖಂಡರು ಪಾಲ್ಗೊಂಡಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.