ಅಪರಾಧ ಸುದ್ದಿ

ರಿಪ್ಪನ್‌ಪೇಟೆ: ಅಕ್ರಮ ಜಿಂಕೆ ಮಾಂಸ ಮಾರಾಟ ಜಾಲ ಬೇಧಿಸಿದ ಅರಣ್ಯ ಪೊಲೀಸ್ ಪಡೆ – ಇಬ್ಬರ ಬಂಧನ

ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರುವ ನೆವಟೂರು ಆನೆಕೆರೆ ಸಮೀಪ ಅಕ್ರಮವಾಗಿ ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸುವಲ್ಲಿ ಪೊಲೀಸ್ ಅರಣ್ಯ ಸಂಚಾರಿ ದಳ ಯಶಸ್ವಿಯಾಗಿದೆ.

InShot 20260912 141440044

ರಿಪ್ಪನ್‌ಪೇಟೆ: ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರುವ ನೆವಟೂರು ಆನೆಕೆರೆ ಸಮೀಪ ಅಕ್ರಮವಾಗಿ ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸುವಲ್ಲಿ ಪೊಲೀಸ್ ಅರಣ್ಯ ಸಂಚಾರಿ ದಳ ಯಶಸ್ವಿಯಾಗಿದೆ.

WhatsApp Group Join Now
Telegram Group Join Now
Instagram Group Join Now

ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆಗಿಳಿದ ಅರಣ್ಯ ಸಂಚಾರಿ ದಳದ ಪಿಎಸ್ಐ ವಿನಾಯಕ ಕೆ. ಅವರ ನೇತೃತ್ವದ ತಂಡ, ಸ್ಥಳದ ಮೇಲೆ ದಿಢೀರ್ ದಾಳಿ ನಡೆಸಿ ಜಿಂಕೆಯ ದೇಹ ಹಾಗೂ ಮಾಂಸವನ್ನು ಜಪ್ತಿ ಮಾಡಿದೆ.

ಒಟ್ಟು 34.945 ಕೆ.ಜಿ. ತೂಕದ ಜಿಂಕೆಯ ದೇಹ ಹಾಗೂ ಮಾಂಸ ವಶಪಡಿಸಿಕೊಳ್ಳಲಾಗಿದ್ದು, ಈ ಕೃತ್ಯದಲ್ಲಿ ಶಾಮೀಲಾಗಿದ್ದ ನೆವಟೂರು ಆನೆಕರೆ ನಿವಾಸಿಗಳಾದ ನಿಂಗಪ್ಪ ಮತ್ತು ರಾಮಪ್ಪ ಎಂಬ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಪಿಎಸ್ಐ ವಿನಾಯಕ ಕೆ. ಅವರ ಮಾರ್ಗದರ್ಶನದಲ್ಲಿ ನಡೆದ ಈ ದಾಳಿಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಆಂಜನೇಯ ಪಾಟೀಲ್, ಬಿ.ಸಿ. ಗಣೇಶ, ಚಂದ್ರಕಾಂತ, ಮಹೇಶ, ಹೆಚ್.ಬಿ. ದೊಡ್ಡಮನಿ ಮತ್ತು ಪ್ರಮೋದಿನಿ ಅವರುಗಳು ಸಕ್ರಿಯವಾಗಿ ಪಾಲ್ಗೊಂಡಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]