ಅಪರಾಧ ಸುದ್ದಿ

ಅರಣ್ಯ ಸಿಬ್ಬಂದಿ ಜಮೀನಿನಲ್ಲಿ ಅಕ್ರಮ ನಾಟ ಪತ್ತೆ ; ಡಿಆರ್‌ಎಫ್‌ಒ ಭಾಗಿ ಶಂಕೆ

ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಂಗ್ರಹಿಸಿರುವ ಪ್ರಕರಣ ಅರಣ್ಯ ಇಲಾಖೆಯ ಸಂಚಾರಿ ದಳದ ಪರಿಶೀಲನೆಯ ವೇಳೆ ಬೆಳಕಿಗೆ ಬಂದಿದೆ.

ಅರಣ್ಯ ಸಿಬ್ಬಂದಿ ಜಮೀನಿನಲ್ಲಿ ಅಕ್ರಮ ನಾಟ ಪತ್ತೆ Trees

ತೀರ್ಥಹಳ್ಳಿ: ತಾಲೂಕಿನ ಮುಂಡುವಳ್ಳಿ ಗ್ರಾಮದ ಶಾಂತಿಕೆರೆ ವ್ಯಾಪ್ತಿಯ ಮೃಗವಧೆ ಮೀಸಲು ಅರಣ್ಯದ ಸರ್ವೇ ನಂ. 188ರಲ್ಲಿ ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಂಗ್ರಹಿಸಿರುವ ಪ್ರಕರಣ ಅರಣ್ಯ ಇಲಾಖೆಯ ಸಂಚಾರಿ ದಳದ ಪರಿಶೀಲನೆಯ ವೇಳೆ ಬೆಳಕಿಗೆ ಬಂದಿದೆ.

WhatsApp Group Join Now
Telegram Group Join Now
Instagram Group Join Now

ಅರಣ್ಯ ವೀಕ್ಷಕ ಫಿಲಿಪ್ ಡಿಸೋಜಾ ಅವರಿಗೆ ಸೇರಿದ ತೋಟದ ಮನೆಯಲ್ಲಿ ಬೋಗಿ, ಮತ್ತಿ, ಹೊನ್ನೆ ಸೇರಿದಂತೆ ವಿವಿಧ ಜಾತಿಯ ಮರಗಳ ನಾಟಗಳು ಪತ್ತೆಯಾಗಿದ್ದು, ಅರಣ್ಯ ಅಧಿಕಾರಿಗಳು ಅವುಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಮೈಸೂರು ಕಾಗದ ಕಾರ್ಖಾನೆ (ಎಂಪಿಎಂ) ನಡುತೋಪಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಫಿಲಿಪ್ ಡಿಸೋಜಾ ಅವರು ಅರಣ್ಯ ಪ್ರದೇಶದಲ್ಲಿ 10 ಎಕರೆಗೂ ಅಧಿಕ ಜಾಗವನ್ನು ಒತ್ತುವರಿ ಮಾಡಿಕೊಂಡು ತೋಟ ನಿರ್ಮಿಸಿಕೊಂಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಇದೇ ವೇಳೆ, ಅಕ್ರಮ ಮರದ ಸಂಗ್ರಹಕ್ಕೆ ಉಪ ವಲಯ ಅರಣ್ಯಾಧಿಕಾರಿ (ಡಿಆರ್‌ಎಫ್‌ಒ) ಹರೀಶ್ ನಾಯಕ್ ಅವರು ಸಹಕರಿಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಮರದ ನಾಟ ಸಂಗ್ರಹಿಸಿರುವ ಕುರಿತು ಸಾರ್ವಜನಿಕರಿಂದ ಶಿವಮೊಗ್ಗ ಡಿಎಫ್‌ಒ ಅವರಿಗೆ ದೂರು ಸಲ್ಲಿಕೆಯಾಗಿದ್ದ ಹಿನ್ನೆಲೆಯಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ ಎನ್ನಲಾಗಿದೆ.

ಪ್ರಕರಣದಲ್ಲಿ ಇಲಾಖೆಯ ಸಿಬ್ಬಂದಿಯೇ ಭಾಗಿಯಾಗಿರುವ ಬಗ್ಗೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರು ಕಂಡುಬಂದಲ್ಲಿ ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!