ರಿಪ್ಪನ್‌ಪೇಟೆ ; ಬಾಳೂರು ಗ್ರಾಮ ಪಂಚಾಯಿತ್ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡ ವೀರಶೈವ ಲಿಂಗಾಯಿತ ಸಮಾಜದ ಹಿರಿಯ ಮುಖಂಡ ಕುಕ್ಕಳಲೇ ಕೆ.ಆರ್.ನಾಗರಾಜಗೌಡ (70) ತಮ್ಮ ಸ್ವಗೃಹದಲ್ಲಿ ಶುಕ್ರವಾರ ರಾತ್ರಿ ನಿಧನ ಹೊಂದಿದ್ದಾರೆ.
ಪತ್ನಿ, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಸಂತಾಪ ;
ಕುಕ್ಕಳಲೇ ಗ್ರಾಮದ ಕೆ.ಆರ್.ನಾಗರಾಜಗೌಡ ಇವರ ಅಕಾಲಿಕ ನಿಧನಕ್ಕೆ ಆನಂದಪುರ ಮುರುಘಾಮಠದ ಜಗದ್ಗುರು ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಗಳು, ಕೋಣಂದೂರು ಬೃಹನ್ಮಠದ ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಜಿ, ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ, ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಅಭಿನವ ಚನ್ನಬಸವ ಮಹಾಸ್ವಾಮಿಜಿ, ಶಾಸಕ ಗೋಪಾಲಕೃಷ್ಣ ಬೇಳೂರು, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಮಾಜಿ ಶಾಸಕರಾದ ಡಾ.ಜಿ.ಡಿ.ನಾರಾಯಣಪ್ಪ, ಬಿ.ಸ್ವಾಮಿರಾವ್, ಜಿಲ್ಲಾ ಪಂಚಾಯ್ತಿ ಮಾಜಿ ಆಧ್ಯಕ್ಷ ಕಲಗೋಡು ರತ್ನಾಕರ್, ತೀವ್ರ ಸಂತಾಪ ವ್ಯಕ್ತಪಡಿಸಿ ಮೃತರ ಕುಟುಂಬಕ್ಕೆ ಭಗವಂತ ದುಃಖ ಭರಿಸಿಕೊಳ್ಳುವ ಶಕ್ತಿ ನೀಡಲೆಂದು ಬೇಡಿಕೊಂಡಿದ್ದಾರೆ.