Accident

ಕಾರು ಅಪಘಾತ ; ಬಿಎಸ್ಎನ್ಎಲ್ ಮಾಜಿ ನೌಕರ ಸ್ಥಳದಲ್ಲೇ ಸಾ*ವು

ಕಾರು ಅಪಘಾತ ; ಬಿಎಸ್ಎನ್ಎಲ್ ಮಾಜಿ ನೌಕರ ಸ್ಥಳದಲ್ಲೇ ಸಾ*ವು – InShot 20260728 094936899

ಶಿವಮೊಗ್ಗ : ತಾಲೂಕಿನ ಆಯನೂರು-ಸಿರಿಗೆರೆ ರಸ್ತೆಯ ಹೊಸೂರು ದರ್ಗಾ ಸಮೀಪ ಭೀಕರ ಕಾರು ಅಪಘಾತ ಸಂಭವಿಸಿ, ದಾವಣಗೆರೆ ಮೂಲದ ಬಿಎಸ್ಎನ್ಎಲ್ ಮಾಜಿ ನೌಕರ ಸುರೇಶ್ (65) ಸ್ಥಳದಲ್ಲೇ ಸಾ*ವನ್ನಪ್ಪಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಮೃ*ತರು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ತಮ್ಮ ಮಗನೊಂದಿಗೆ ಮಾರುತಿ ಸ್ವಿಫ್ಟ್ ಕಾರಿನಲ್ಲಿ ದಾವಣಗೆರೆಗೆ ಹಿಂತಿರುಗುತ್ತಿದ್ದಿದ್ದರು. ಕಾರನ್ನು ಸುರೇಶ್ ಅವರ ಮಗ ಚಾಲನೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಆಯನೂರು ರಸ್ತೆಯ ಹೊಸೂರು ದರ್ಗಾ ಸಮೀಪ ಕಾರು ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಎಡಭಾಗದಲ್ಲಿದ್ದ ಮೋರಿಗೆ ರಭಸವಾಗಿ ಡಿಕ್ಕಿ ಹೊಡೆದಿತು. ಈ ಪರಿಣಾಮವಾಗಿ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗಂಭೀರವಾಗಿ ಗಾಯಗೊಂಡ ಸುರೇಶ್ ಸ್ಥಳದಲ್ಲೇ ಮೃ*ತಪಟ್ಟಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಘಟನೆಯ ಬಗ್ಗೆ ತಿಳಿದ ತಕ್ಷಣ ಕುಂಸಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]