SHIKARIPURA ; ತಾಲೂಕಿನ ಜನಪ್ರಿಯ ರಾಜಕಾರಣಿ ನಿವೃತ್ತ ಕೆಎಎಸ್ ಅಧಿಕಾರಿ, ಕರ್ನಾಟಕ ರಾಜ್ಯ ಉಗ್ರಣಾ ನಿಗಮದ ಮಾಜಿ ಅಧ್ಯಕ್ಷ ಹೆಚ್. ಟಿ ಬಳಿಗಾರ (62) ಗುರುವಾರ ರಾತ್ರಿ ಹೃದಯಘಾತದಿಂದ ಬೆಂಗಳೂರಿನಲ್ಲಿ ನಿಧನ ಹೊಂದಿದರು.
ಬಂಗಾರಪ್ಪನವರ ಶಿಷ್ಯರಾಗಿದ್ದ ಇವರು ಎಲ್ಲಾ ಪಕ್ಷದವರ ಜೊತೆಗೆ ಸ್ನೇಹಜೀವಿಯಾಗಿದ್ದರು. ಎಲ್ಲಾ ಪಕ್ಷದವರ ಜೊತೆ ಜಾತ್ಯಾತೀತವಾಗಿ ಅಪಾರ ಸ್ನೇಹ ಬಳಗ ಹೊಂದಿದ್ದ ಇವರು ನಂತರ ಜೆ.ಡಿ.ಎಸ್ ಪಕ್ಷದಲ್ಲಿ ಗುರುತಿಸಿಕೊಂಡು ಶಿಕಾರಿಪುರದಲ್ಲಿ ಮಾಜಿ ಸಿ.ಎಂ. ಯಡಿಯೂರಪ್ಪನವರ ವಿರುದ್ಧ ಎರಡು ಬಾರಿ ಸ್ಪರ್ಧೆ ಮಾಡಿ ಸೋತಿದ್ದರು. ಶಿಕಾರಿಪುರ ತಾಲೂಕಿನ ಸಮಗ್ರ ಏತ ನೀರಾವರಿಗೆ ಶ್ರಮವಹಿಸಿದ್ದ ಇವರು ನಂತರ ದಿನಗಳಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.
ಮೃತರಿಗೆ ಇಬ್ಬರು ಪುತ್ರಿಯರು, ಇಬ್ಬರು ಮೊಮ್ಮಕ್ಕಳಿದ್ದು ತಾಲೂಕಿನ ಅವರ ಅಸಂಖ್ಯಾತ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಶಿಕಾರಿಪುರ ಬಳಿಯ ಮುಗಳಗೆರೆಯ ಅವರ ತೋಟದಲ್ಲಿ ಇಂದು ಸಂಜೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.