ಮಾಜಿ ಸಿಎಂ ಎಸ್.ಎಂ. ಕೃಷ್ಣ ವಿಧಿವಶ ; ರಾಜ್ಯದಲ್ಲಿ ನಾಳೆ ಸರ್ಕಾರಿ ರಜೆ ಘೋಷಣೆ

Written by malnadtimes.com

Published on:

BANGALORE ; ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ಬುಧವಾರ (ಡಿ. 11) ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಸದಾಶಿವ ನಗರದಲ್ಲಿರುವ ಎಸ್.ಎಂ.ಕೃಷ್ಣ ಅವರ ನಿವಾಸದಲ್ಲಿ ಬುಧವಾರ ಬೆಳಗ್ಗೆ 8ರವರೆಗೆ ಅಂತಿಮ ದರ್ಶನ ವ್ಯವಸ್ಥೆ ಕಲ್ಪಿಸಲಾಗಿದೆ. 10:30ರಿಂದ ಮದ್ದೂರಿನಲ್ಲಿ ಸಾರ್ವಜನಿಕರಿಗಾಗಿ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುವುದು. ಬಳಿಕ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. 

ಮೂರು ದಿನ ಶೋಕಾಚರಣೆ :

ಎಸ್.ಎಂ.ಕೃಷ್ಣ ನಿಧನದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಡಿ.10ರಿಂದ 12ರವರೆಗೆ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.  

ಶೋಕಾಚರಣೆ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು ಎಂದು ತಿಳಿಸಿದೆ. 

ಎಸ್.ಎಂ.ಕೃಷ್ಣರ ಅಂತ್ಯಕ್ರಿಯೆಯು ಡಿ.11ರಂದು ಅವರ ಹುಟ್ಟುರಾದ ಮಂಡ್ಯ ಜಿಲ್ಲೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ. 

Leave a Comment