ಬೈಕ್ ಅಪಘಾತ ; ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಮಾಜಿ ಸಚಿವ ಹರತಾಳು ಹಾಲಪ್ಪ

Written by malnadtimes.com

Updated on:

ಸಾಗರ ; ಈಚಲುಕೊಪ್ಪ ಸಮೀಪ ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿದ್ದು ಓರ್ವ ವ್ಯಕ್ತಿಗೆ ಗಾಯವಾಗಿರುವ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಸಾಗರದಿಂದ ಹೊಸನಗರಕ್ಕೆ ಖಾಸಗಿ ಕಾರ್ಯಕ್ರಮಕ್ಕೆ ಹೋಗುತ್ತಿದ್ದ ಮಾಜಿ ಸಚಿವ ಹರತಾಳು ಹಾಲಪ್ಪ ಅಪಘಾತವಾಗಿ ರಸ್ತೆಯ ಪಕ್ಕದಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ನೋಡಿದ ತಕ್ಷಣ ತಮ್ಮ ವಾಹನವನ್ನು ನಿಲ್ಲಿಸಿ 108 ಅಂಬುಲೆನ್ಸ್ ಗೆ ಕರೆ ಮಾಡಿ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಅಪಘಾತಕ್ಕೆ ಒಳಗಾದ ವ್ಯಕ್ತಿ ಹೊಸನಗರ ತಾಲೂಕಿನ ಸೊಪ್ಪಿನಮಲ್ಲೆ ಗ್ರಾಮದ ಕೃಷ್ಣಪ್ಪ ಎಂದು ತಿಳಿದುಬಂದಿದೆ. ಒಟ್ಟಿನಲ್ಲಿ ಅಪಘಾತವಾಗಿದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸುವ ಮೂಲಕ ಮಾನವೀಯತೆ ಮೆರೆದ ಮಾಜಿ ಸಚಿವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Leave a Comment