Ripponpete

ಶಾಖವಳ್ಳಿಯ ಸುಮಾ ನಿವಾಸಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

ರಿಪ್ಪನ್‌ಪೇಟೆ : ಕೋಡೂರು ಸಮೀಪದ ಶಾಖವಳ್ಳಿ ಗ್ರಾಮದ ಸುಮಾ (27) ಹೆರಿಗೆ ಸಂದರ್ಭದಲ್ಲಿ ಮಗು ಜನಿಸಿದ ನಂತರ ತೀವ್ರ ರಕ್ತಸ್ರಾವವಾಗಿ ಅಗತ್ಯ ಸಮಯದಲ್ಲಿ ಸೂಕ್ತ ಚಿಕಿತ್ಸೆ ದೊರಕದೇ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾಗಿದ್ದು ವಿಷಯ ತಿಳಿದು ಇಂದು ಮೃತ ಸುಮಾ ಮಹೇಶ್ ನಿವಾಸಕ್ಕೆ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಕಿಮ್ಮನೆ ರತ್ನಾಕರ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ವೈಯಕ್ತಿಕ ಧನ ಸಹಾಯ ನೀಡಿದರು.

WhatsApp Group Join Now
Telegram Group Join Now
Instagram Group Join Now

ಇದೇ ಸಂದರ್ಭದಲ್ಲಿ ಸಚಿವ ಯು‌.ಟಿ ಖಾದರ್ ಜೊತೆ ದೂರವಾಣಿ ಮೂಲಕ ಮಾತನಾಡಿ, ಖಾಸಗಿ ಆಸ್ಪತ್ರೆ ವೆಚ್ಚ ಸೇರಿದಂತೆ ಲಕ್ಷಾಂತರ ಹಣ ವ್ಯಯವಾಗಿದ್ದು, ಜನಿಸಿದ ಗಂಡು ಮಗು ಕೂಡಾ ತಾಯಿ ಇಲ್ಲದೇ ಅನಾಥವಾಗಿದೆ. ಕಡು ಬಡತನದ ಹಿಂದುಳಿದ ವರ್ಗದ ಕುಟುಂಬದ ಈ ಮಹಿಳೆಯ ಕುಟುಂಬಕ್ಕೆ ಮತ್ತು ಇನ್ನೂ ಚಿಕಿತ್ಸೆಯಲ್ಲಿ ಇರುವ ಮಗುವಿನ ನಿರ್ವಹಣೆಗೆ ಪರಿಹಾರವನ್ನು ಸರ್ಕಾರದಿಂದ ಒದಗಿಸುವಂತೆ ಸಚಿವರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಮುಖಂಡರು, ಗ್ರಾಮಸ್ಥರು ಇದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]