ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKSRTC) ವತಿಯಿಂದ ಉಚಿತವಾಗಿ ಲಘು ಮತ್ತು ಭಾರಿ ವಾಹನ ಚಾಲನೆಯನ್ನು ಕಲಿಯಲು ಆಸಕ್ತಿಯನ್ನು ಹೊಂದಿರುವ ನಿರುದ್ಯೋಗಿ ಯುವಕರಿಗೆ ಮತ್ತು ಯುವತಿಯರಿಗೆ ತರಬೇತಿಯನ್ನು ನೀಡಲಾಗುತ್ತಿದೆ. ನಿರುದ್ಯೋಗಿ ಯುವಕರಿಗೆ ಮತ್ತು ಯುವತಿಯರು ಯಾವುದೇ ಶುಲ್ಕವನ್ನು ಪಾವತಿ ಮಾಡದೇ ಸರ್ಕಾರದ ಅಧೀನದಲ್ಲಿರುವ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಉತ್ತಮ ಗುಣಮಟ್ಟದ ವಾಹನ ಚಾಲನಾ ತರಬೇತಿಯನ್ನು ಪಡೆದುಕೊಂಡು ಉದ್ಯೋಗವನ್ನು ಪಡೆದುಕೊಳ್ಳಬಹುದು.
ಆಯ್ಕೆಯಾದ ಅಭ್ಯರ್ಥಿಗಳಿಗೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಉಚಿತವಾಗಿ ಏರ್ಪಡಿಸಿರುವ ಲಘು ಮತ್ತು ಭಾರಿ ವಾಹನಾ ಚಾಲನಾ ತರಬೇತಿಯಲ್ಲಿ ಬಸ್ಸು ಮತ್ತು ಲಾರಿಯನ್ನು ಚಾಲನೆ ಮಾಡುವುದನ್ನು ಕಲಿಸಲಾಗುತ್ತದೆ. ಈ ತರಬೇತಿಯು ಉಚಿತವಾಗಿರುತ್ತದೆ ಮತ್ತು ಉಚಿತ ವಸತಿ ಮತ್ತು ಊಟದ ಸೌಲಭ್ಯವನ್ನು ನೀಡಲಾಗುತ್ತದೆ. ಈ ಸಂಸ್ಥೆಯ ವತಿಯಿಂದ 30 ದಿನದ ಉಚಿತ ತರಬೇತಿ ಇರುತ್ತದೆ.
ಅರ್ಜಿಯಲ್ಲಿ ಸಲ್ಲಿಸಬೇಕಾದರೇ ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು, ನಿರುದ್ಯೋಗಿ ಯುವಕ/ಯುವತಿಯರಿಗೆ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ ಮತ್ತು ಅಭ್ಯರ್ಥಿಯು ಪರಿಶಿಷ್ಟ ಜಾತಿ.ಪರಿಶಿಷ್ಟ ಪಂಗಡಗಳ ವರ್ಗಕ್ಕೆ ಸೇರಿದವರಾಗಿರಬೇಕು. ಅರ್ಹ ಅರ್ಜಿದಾರರು ತರಬೇತಿಯಲ್ಲಿ ಭಾಗವಹಿಸಲು 8095161818/9449971416/9449925367 ಈ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಮುಂಚಿತವಾಗಿ ನಿಮ್ಮ ಹೆಸರನ್ನು ನೊಂದಣಿಮಾಡಿಕೊಂಡು ತರಬೇತಿಯನ್ನು ಪಡೆಯಬಹುದು.
ತರಬೇತಿಯಲ್ಲಿ ಪಾಲ್ಗೊಳ್ಳಲು ಕೆಲವೊಂದು ದಾಖಲೆಯನ್ನು ಕೊಡಬೇಕಾಗುತ್ತದೆ. ಅಭ್ಯರ್ಥಿಯ ಆಧಾರ್ ಕಾರ್ಡ್ ಪ್ರತಿ, ಅಭ್ಯರ್ಥಿಯ ಫೋಟೋ, ಬ್ಯಾಂಕ್ ಪಾಸ್ಬುಕ್ ಪ್ರತಿ, ಜಾತಿ ಮತ್ತು ಆಧಾಯ ಪ್ರಮಾಣ ಪತ್ರ, ಮೊಬೈಲ್ ನಂಬರ್ ಮತ್ತು ರೇಶನ್ ಕಾರ್ಡ್ ಪ್ರತಿಯನ್ನು ಕೊಡಬೇಕಾಗುತ್ತದೆ.
ತರಬೇತಿಯು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಾದೇಶಿಕ ತರಬೇತಿ ಕೇಂದ್ರವು ಗಂಗಿಭಾವಿ ರಸ್ತೆ, ಶಿಗ್ಗಾಂವ, ಹಾವೇರಿ ಜಿಲ್ಲೆಯಲ್ಲಿ ನಡೆಯುತ್ತದೆ. ದೂರವಾಣಿ ಸಂಖ್ಯೆ- 8095161818/9449925367/9449971416
Read More
ಬಿಪಿಎಲ್ ರೇಷನ್ ಕಾರ್ಡ್ ಇದ್ದವರಿಗೆ ಬಿಗ್ ನ್ಯೂಸ್ ! ರದ್ದಾಗಲಿವೆ ಈ ಕಾರ್ಡ್ ಗಳು !
ಸರ್ಕಾರಿ ನೌಕರರೇ ಇದನ್ನ ಗಮನಿಸಿ: ಆರೋಗ್ಯ ಸಂಜೀವಿನಿ ಯೋಜನೆಗೆ ಈ ದಾಖಲೆಗಳು ಕಡ್ಡಾಯ!
ಸುಲಭವಾಗಿ ಇ-ಸ್ವತ್ತು ದಾಖಲೆಯನ್ನು ನಿಮ್ಮ ಮೊಬೈಲ್ನಲ್ಲೇ ಉಚಿತವಾಗಿ ಪಡೆಯಬಹುದು.
MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.