ಹೊಸನಗರ

ನ.22 ರಂದು SSLC ವಿದ್ಯಾರ್ಥಿಗಳಿಗಾಗಿ ಉಚಿತ ಶೈಕ್ಷಣಿಕ ಕಾರ್ಯಗಾರ

HOSANAGARA ; ಶಾಲಾ ಶಿಕ್ಷಣ ಇಲಾಖೆ, ಬಿಇಒ ಕಚೇರಿ, ಸಿದ್ದಾಂತ್ ಫೌಂಡೇಶನ್ ಉಡುಪಿ, ಶ್ರೀ ವಿದ್ಯಾಭಾರತಿ ಶಿಕ್ಷಣ ಸಂಸ್ಥೆ ಹಾಗೂ ಶ್ರೀ ಗುರೂಜಿ ಇಂಟರ್‌ನ್ಯಾಶನಲ್ ವಸತಿ ಶಾಲೆ ಸಹಯೋಗದಲ್ಲಿ ಇದೇ ನವೆಂಬರ್ 22ರ ಶುಕ್ರವಾರ ಪಟ್ಟಣದ ಗಾಯತ್ರಿ ಮಂದಿರದಲ್ಲಿ ಬೆಳಗ್ಗೆ 9-30ರಿಂದ ಸಂಜೆ 4 ಗಂಟೆವರೆಗೆ 2024-25ನೇ ಸಾಲಿನ ತಾಲೂಕಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗಾಗಿ ಪ್ರೇರಣಾ-24-25 ಶೈಕ್ಷಣಿಕ ಮಾಹಿತಿ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಶಿಬಿರದಲ್ಲಿ ‘ಎಸ್.ಎಸ್.ಎಲ್.ಸಿ. ನಂತರ ಮುಂದೇನು…?’ ಎಂಬ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆಗೆ ನುರಿತ ಶೈಕ್ಷಣಿಕ ತಜ್ಞರು ಉತ್ತರಿಸಿ ಮಾರ್ಗದರ್ಶನ ನೀಡಲಿದ್ದಾರೆ.

ಬಿಇಒ ಹೆಚ್.ಆರ್. ಕೃಷ್ಣಮೂರ್ತಿ ಕಾರ್ಯಗಾರ ಉದ್ಘಾಟಿಸಲಿದ್ದು, ಉಡುಪಿ ಪ್ರೇರಣಾ ಟ್ರಸ್ಟ್, ಸಿದ್ದಾಂತ್ ಫೌಂಡೇಶನಿನ ಶಿಕ್ಷಣ ತಜ್ಞರಾದ ಡಾ.ಮುರಳಿಧರ್ ಕಿರಣ್ಕೆರೆ, ಪ್ರೊ.ಧೀರಜ್ ಬೆಲ್ಲಾರಿ, ಪ್ರೊ. ಸಂಪತ್‌ರಾಜ್, ಸಿ.ಎ.ಗೋಪಾಲಕೃಷ್ಣ ಭಟ್ ಸೇರಿದಂತೆ ಆರು ಸರಕಾರಿ ಅಧಿಕಾರಿಗಳು ಶಿಬಿರದಲ್ಲಿ ಭಾಗವಹಿಸಿ ಸೂಕ್ತ ಮಾಹಿತಿ ನೀಡಲಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ತಾಲೂಕಿನ ಖಾಸಗಿ ಹಾಗೂ ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿಗಳು ಕಾರ್ಯಗಾರದಲ್ಲಿ ತಪ್ಪದೇ ಭಾಗವಹಿಸುವಂತೆ ಶ್ರೀ ಗುರುಜೀ ಶಾಲೆಯ ಮುಖ್ಯಸ್ಥ ಸುದೇಶ್ ಕಾಮತ್ ವಿನಂತಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಕಾರ್ಯಗಾರದ ವೇಳೆ ಉಚಿತ ಊಟ, ಚಹ ಒದಗಿಸಲಾಗುವುದು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>