News

ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಲು ಅರ್ಜಿ ಆಹ್ವಾನ ! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹಾಗು ಮಾನದಂಡವೇನು ಇಲ್ಲಿದೆ ಮಾಹಿತಿ

Free sewing Machine Scheme :ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು ಹಿಂದುಳಿದ ವರ್ಗಗಳ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಲು ಅರ್ಜಿಗಳನ್ನು ಆಹ್ವಾನಿಸಿದೆ. ಈ ಯೋಜನೆಯು ಮಹಿಳೆಯರಿಗೆ ಆರ್ಥಿಕವಾಗಿ ಸ್ವಾವಲಂಬಿಯಾಗಲು ಸಹಾಯ ಮಾಡುವುದಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಹೊಲಿಗೆ ಯಂತ್ರ ಅರ್ಜಿ 2025 last date

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 30 ಆಗಿದ್ದು, ಈ ವಿಷಯದಲ್ಲಿ ಸರ್ಕಾರವು ಅಧಿಸೂಚನೆ ಹೊರಡಿಸಿದೆ. ಗ್ರಾಮೀಣ ಪ್ರದೇಶದಲ್ಲಿ ವಾರ್ಷಿಕ ಆದಾಯ 98,000 ರೂ. ಮತ್ತು ಸೂಚನಾ ಪ್ರದೇಶದಲ್ಲಿ 1,20,000 ರೂ. ಕ್ಕಿಂತ ಕಡಿಮೆ ಇರಬೇಕು. 18 ರಿಂದ 55 ವರ್ಷ ವಯಸ್ಸಿನ ಮಹಿಳೆಯರು ಸೇವಾ സಿಂಧು ಪೋರ್ಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಯೋಜನೆಯು ಏನು ಮತ್ತು ಅರ್ಜಿ ಸಲ್ಲಿಸುವ ವಿಧಾನವು ಏನು ಎಂಬುದನ್ನು ತಿಳಿಯೋಣ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ

ಇದು ಉಚಿತ ಹೊಲಿಗೆಯಂತ್ರ ವಿತರಣೆ ಯೋಜನೆಯಾಗಿದೆ, ಇದರಿಂದ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಉಚಿತವಾಗಿ ಹೊಲಿಗೆಯಂತ್ರಗಳನ್ನು ನೀಡುವ ಮೂಲಕ ಅವರ ಆರ್ಥಿಕ ಸ್ವಾವಲಂಬನೆಯನ್ನು ಸಾಧಿಸುವುದೇ ಉದ್ದೇಶ. ವಿಧಾನಸಭೆಯ ಕೃಷಿ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು ಬಡ ಕುಟುಂಬಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸುವ ಈ ಸ್ವಾವಲಂಬಿ ಯೋಜನೆಯನ್ನು ಪ್ರಸ್ತುತ ಸಾಲಿನಲ್ಲಿ ಕಾರ್ಯಗತಗೊಳಿಸುತ್ತಿದೆ.

Holige yantra application ಅರ್ಹತೆ ಮಾನದಂಡಗಳು ಹೀಗಿವೆ:

ಹಿಂದುಳಿದ ವರ್ಗಗಳ ಬಡ ಕುಟುಂಬಗಳಿಗೆ ಹೂಲಿಗೆ ಯಂತ್ರಗಳನ್ನು ವಿತರಿಸುವ ಯೋಜನೆಯಲ್ಲಿ ಭಾಗವಹಿಸಲು ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು. ಆಯ್ದ ಸಮುದಾಯಗಳ ಮಹಿಳೆಯರಿಗೆ ಮಾತ್ರ ಈ ಯೋಜನೆಯ ಪ್ರಸ್ತಾವನೆ ನೀಡಲಾಗಿದೆ. ಕುಟುಂಬದ ವಾರ್ಷಿಕ ಆದಾಯ ಗ್ರಾಮಾಂತರ ಪ್ರದೇಶದಲ್ಲಿ ರೂ. 98,000/- ಹಾಗೂ ಪಟ್ಟಣ ಪ್ರದೇಶದಲ್ಲಿ ರೂ. 1,20,000/- ಒಳಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ನಡುವೆ ಇರಬೇಕು.

ಈ ಮೇಲ್ಕಂಡ ಎಲ್ಲಾ ಯೋಜನೆಗಳು ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ ಹಾಗೂ ಇಂತಹ ಉಪ ಸಮುದಾಯಗಳನ್ನು ಹೊರತುಪಡಿಸಿ, ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಯಲ್ಲಿ ಉಳಿದ ಸಮುದಾಯಗಳಿಗೆ ಅನ್ವಯವಾಗುತ್ತದೆ. ನಿಗಮದ ಯಾವುದೇ ಯೋಜನೆಯಲ್ಲಿ ಮೊದಲೇ ಪ್ರಯೋಜನ ಪಡೆದಿದ್ದರೆ, ಅವರು ಮತ್ತು ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹರಾಗುವುದಿಲ್ಲ. 2023-24ನೇ ಸಾಲಿನಲ್ಲಿ ಅರ್ಜಿಸಲ್ಲಿಸಿ ಸೌಲಭ್ಯ ಪಡೆಯದ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಶ್ಯಕತೆಯಿಲ್ಲ.

ಹೊಲಿಗೆ ಯಂತ್ರ ಅರ್ಜಿ ಸಲ್ಲಿಸುವ ವಿಧಾನ :

ಈ ಯೋಜನೆಯಡಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಸಂಪೂರ್ಣವಾಗಿ ಆನ್‌ಲೈನ್‌ನಲ್ಲಿ ನಡೆಯುತ್ತದೆ. ನೀವು ಸೇವಾ ಸಿಂಧು ಪೋರ್ಟಲ್ (Seva Sindhu Portal) ಅಥವಾ ಗ್ರಾಮಒನ್ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಬಹುದು. ಸೇವಾ ಸಿಂಧು ಪೋರ್ಟಲ್‌ಗೆ ಭೇಟಿ ನೀಡಲು https://sevasindhuservices.karnataka.gov.in/ ಗೆ ಹೋಗಿ. ಇ-ಮೇಲ್ ಐಡಿ, ಆಧಾರ್ ಸಂಖ್ಯೆ ಅಥವಾ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಲಾಗಿನ್ ಆಗಿ. ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಹೊಲಿಗೆ ಯಂತ್ರ ವಿತರಣೆ ಯೋಜನೆಯ ಅರ್ಜಿಯನ್ನು ಹುಡುಕಿ. ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ಹಾಗೂ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ. ಅರ್ಜಿ ಸಲ್ಲಿಸಿ. ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್‌ಲೋಡ್ ಮಾಡಿ.

ಹೊಲಿಗೆ ಯಂತ್ರ ಅಗತ್ಯ ದಾಖಲೆಗಳು :

ಅರ್ಜಿದಾರರು ಆಧಾರ್ ಜೋಡಣೆಯಾದ ಕಾರ್ಯಗತ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್‌ನಲ್ಲಿ ಇರುವಂತೆ ಅರ್ಜಿದಾರನ ಹೆಸರು (ಶ್ರೀ/ಶ್ರೀಮತಿ/ಕುಮಾರಿ) ಮತ್ತು ಇತರ ದಾಖಲೆಗಳು, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್‌ಬುಕ್‌ನಲ್ಲಿ ಸಹ ಹೊಂದಾಣಿಕೆಯಾಗಿರಬೇಕು.

Read more

SSC ನೇಮಕಾತಿ 2025: ಒಟ್ಟು 14,582 ಹುದ್ದೆಗಳಿಗೆ ಅರ್ಜಿ ಆಹ್ವಾನ !

E Khata : ಕಟ್ಟಡ ನಕ್ಷೆ ಮಂಜೂರಾತಿಗೆ ಇ-ಖಾತೆ ಕಡ್ಡಾಯ !

ಈ ಯೋಜನೆಯಲ್ಲಿ ರೂ. 20 ಪ್ರೀಮಿಯಂ ಪಾವತಿಸಿ 2 ಲಕ್ಷ ರೂಪಾಯಿಗಳ ವಿಮಾ ರಕ್ಷಣೆ ಪಡೆಯಿರಿ

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650