ರಿಪ್ಪನ್‌ಪೇಟೆ ; ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಮಿತಿಯ 58ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಮೆರವಣಿಗೆಯೊಂದಿಗೆ ವಿನಾಯಕ ವೃತ್ತದಲ್ಲಿ ಹಿಂದೂ ಧ್ವಜಾರೋಹಣ ನೆರವೇರಿಸುವುದರೊಂದಿಗೆ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ 11 ದಿನಗಳ ಗಣಪತಿ ಪ್ರತಿಷ್ಟಾಪನಾ ಪೂಜೆ ಶ್ರದ್ದಾ ಭಕ್ತಿಯೊಂದಿಗೆ ವಿಜೃಂಭಣೆಯೊಂದಿಗೆ ನೆರವೇರಿತು.

ವಿನಾಯಕ ವೃತ್ತದಲ್ಲಿ ಸಿದ್ದಿವಿನಾಯಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಅರ್.ಈಶ್ವರಶೆಟ್ಟಿ ಮತ್ತು ಗ್ರಾಮ ಪಂಚಾಯಿತ್ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ಸಮಿತಿಯ ಅಧ್ಯಕ್ಷ ಸುಧೀರ್ ಪಿ. ಹಿಂದೂ ಧ್ವಜಾರೋಹಣವನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತೀಯ ಹಿಂದೂ ಮಹಾಸಭಾ ಮುಖಂಡರಾದ ಎಂ.ಬಿ.ಮಂಜುನಾಥ, ಎಂ.ಸುರೇಶಸಿಂಗ್, ಆರ್.ರಾಘವೇಂದ್ರ, ಕಾರ್ಯದರ್ಶಿ ಮುರುಳಿಧರ, ಲಕ್ಷ್ಮಣ ಆಟೋ, ರಾಮಚಂದ್ರ ಬಳೆಗಾರ್, ಶ್ರೀನಿವಾಸ ಆಚಾರ್, ಜಯಲಕ್ಷ್ಮಿ, ವೀರಭದ್ರಪ್ಪ, ನಾಗರಾಜ ಪವಾರ್, ರಾಘವೇಂದ್ರ, ಶ್ರೀಧರ, ವೈ.ಜೆ.ಕೃಷ್ಣ, ಸಂತೋಷ,ನವೀನ್, ಇನ್ನಿತರರು ಪಾಲ್ಗೊಂಡಿದ್ದರು.

ಪೊಲೀಸ್ ಠಾಣೆಯಲ್ಲಿ ವಿಘ್ನೇಶ್ವರನ ಪ್ರತಿಷ್ಟಾಪನೆ !
ರಿಪ್ಪನ್‌ಪೇಟೆ ; ಇಲ್ಲಿನ ಪೊಲೀಸ್ ಠಾಣೆಯಲ್ಲಿ ದಿಢೀರ್ ವಿಘ್ನೇಶ್ವರನ ಪ್ರತಿಷ್ಟಾಪನಾ ಪೂಜೆ ನೆರವೇರಿದ್ದು ಸಾರ್ವಜನಿಕರಲ್ಲಿ ಕುತೂಹಲಕ್ಕೆ ಕಾರಣವಾಯಿತು.
ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿಗೆ ವಿರುದ್ಧವಾಗಿ ಮತ್ತೊಂದು ಸಾರ್ವಜನಿಕ ಗಣಪತಿ ಸಮಿತಿಯೊಂದು ಹುಟ್ಟಿಕೊಂಡು ಬೀದಿಗೆ ಬಂದಾಗ ರಾತ್ರೋರಾತ್ರಿ ಯಾರೋ ಗಣಪತಿ ಹಬ್ಬದ ದಿನ ಠಾಣೆಯಲ್ಲಿ ಗಣಪತಿ ಮೂರ್ತಿಯನ್ನು ಇಟ್ಟು ಹೋಗಿದ್ದು ಆಗ ಕರ್ತವ್ಯದಲ್ಲಿದ್ದ ಪಿಎಸ್‌ಐ ಆನಂದ್ ಎಂಬುವರು ಅದನ್ನು ಅರೆಸ್ಟ್ ಮಾಡಿ ನಂತರ ತಮ್ಮ ಮನೆಯಲ್ಲಿ ಪ್ರತಿಷ್ಠಾಪನೆ ಮಾಡಿ ಪೂಜೆ ಸಲ್ಲಿಸುತ್ತಾ ಬಂದಿರುವ ಉದಾಹರಣೆ ಬಿಟ್ಟರೆ ಈ ವರ್ಷದ ನೂತನವಾಗಿ ಠಾಣೆಗೆ ವರ್ಗಾವಣೆಯಾಗಿ ಬಂದಿರುವ ಪಿಎಸ್‌ಐ ರಾಜುರೆಡ್ಡಿ ದಿಢೀರ್ ಹಬ್ಬದ ದಿನ ಗಣಪತಿಯನ್ನು ಮೆರವಣಿಗೆಯ ಮೂಲಕ ಠಾಣೆಗೆ ಗಣಪತಿಯನ್ನು ತರುವುದರೊಂದಿಗೆ ಪ್ರತಿಷ್ಟಾಪನೆ ಮಾಡಿರುವುದು ಸಾರ್ವಜನಿಕರಲ್ಲಿ ಆಶ್ಚರ್ಯವನ್ನುಂಟು ಮಾಡಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.