ಸಾಗರ

67 ವರ್ಷದ ವೃದ್ಧೆ ಯನ್ನು ಕಂಬಕ್ಕೆ ಕಟ್ಟಿ ಹ*ಲ್ಲೆ-ಗೌತಮಪುರದಲ್ಲಿ ಆಘಾತಕಾರಿ ಘಟನೆ!

crime news

ಸಾಗರ : ತಾಲ್ಲೂಕಿನ ಗೌತಮಪುರ ಗ್ರಾಮದಲ್ಲಿ 67 ವರ್ಷದ ವೃದ್ಧೆ ಹುಚ್ಚಮ್ಮ ಅವರ ಮೇಲೆ ಅಮಾನವೀಯ ಹ*ಲ್ಲೆಯೊಂದು ನಡೆದಿದೆ.ಮನೆಯ ಎದುರಿಗೆ ಕಸ ಹಾಕಿದ್ದನ್ನ ಪ್ರಶ್ನೆ ಮಾಡಿದ ಕಾರಣಕ್ಕೆ ನೆರೆಹೊರೆಯವರಾದ ಪ್ರೇಮ, ಮಂಜುನಾಥ್ ಮತ್ತು ದರ್ಶನ್ ಎಂಬವರು ವೃದ್ಧೆಗೆ ನಿಂ*ದನೆ ಮಾಡಿದ್ದು, ಬಳಿಕ ಅವರನ್ನು ಮನೆಯಿಂದ ಎಳೆದೊಯ್ದು ಕಂಬಕ್ಕೆ ಹಗ್ಗದಿಂದ ಕಟ್ಟಿ ಭೀಕರವಾಗಿ ಹ*ಲ್ಲೆ ನಡೆಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಹುಚ್ಚಮ್ಮ ಅವರು ಈ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪ್ರೇಮ, ಮಂಜುನಾಥ್ ಹಾಗೂ ದರ್ಶನ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ವೃದ್ಧೆಯ ಪುತ್ರ ಕನ್ನಪ್ಪ ಮಾತನಾಡುತ್ತಾ, “ನನ್ನ ತಾಯಿ ಮೇಲೆ ನಡೆದ ಈ ಹಲ್ಲೆ ಆಘಾತಕಾರಿ. ಪೊಲೀಸ್ ಇಲಾಖೆ ನನ್ನ ತಾಯಿ ಮತ್ತು ತಂದೆಗೆ ರಕ್ಷಣೆ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಈ ಅಮಾನವೀಯ ಕೃತ್ಯವು ಸಮಾಜವೇ ತಲೆತಗ್ಗಿಸುವಂತಹ ಘಟನೆ. ಜನಪ್ರತಿನಿಧಿಗಳು ಹಾಗೂ ಪೊಲೀಸ್‌ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Read More :EPFO ಚಂದಾದಾರರಿಗೆ ಭರ್ಜರಿ ಗುಡ್ ನ್ಯೂಸ್ :ಮುಂಗಡ ಹಣ ಹಿಂಪಡೆಯುವ ಮಿತಿ ಹೆಚ್ಚಳ !

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650