SHIVAMOGGA | ನಾನು ಸೋತಿರಬಹುದು ಆದರೆ ಶಿವಮೊಗ್ಗ ಬಿಟ್ಟು ಹೋಗಲ್ಲ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ (Shivamogga Loksabha Constituency) ಕಾಂಗ್ರೆಸ್ (Congress) ಅಭ್ಯರ್ಥಿಯಾಗಿದ್ದ ಗೀತಾ ಶಿವರಾಜ್‌ಕುಮಾರ್ (Geetha Shivarajkumar) ಹೇಳಿದರು.
Read More:Gruhalakshmi Scheme | ಈ ಜಿಲ್ಲೆಗಳಿಗೆ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಕ್ರೆಡಿಟ್
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಸುಮಾರು 5.35 ಲಕ್ಷ ಮತಗಳು ಬಂದಿವೆ. ಇದೇನು ಕಡಿಮೆಯೇನಲ್ಲ. ಕಳೆದ ಸಲಕ್ಕಿಂತಲೂ ದುಪ್ಪಟ್ಟು ಮತ ಪಡೆದಿರುವೆ.
ಚುನಾವಣೆ ಎಂದರೆ ಸೋಲು, ಗೆಲುವು ಇದ್ದೇ ಇರುತ್ತದೆ. ಯಾರಾದರೂ ಒಬ್ಬರು ಗೆಲ್ಲಲೇ ಬೇಕಲ್ಲವೇ? ಚುನಾವಣೆಯಲ್ಲಿ ನಾವು ಮತ್ತು ನಮ್ಮ ಪಕ್ಷ ಮಾಡಬೇಕಾದ ಕೆಲಸ ಮಾಡಿದ್ದೇವೆ. ಗೆಲ್ಲುವ ವಿಶ್ವಾಸವಿತ್ತು. ಆದರೆ, ಸೋತಿದ್ದೇನೆ. ಗೆದ್ದವರಿಗೆ ಅಭಿನಂದನೆ. ಅವರು ಒಳ್ಳೆಯ ಕೆಲಸ ಮಾಡಲಿ ಎಂದರು.

ಸೋಲಿನ ಹೊಣೆಯನ್ನು ಯಾರ ಮೇಲೂ ಹೊರಿಸಲು ನನಗೆ ಇಷ್ಟವಿಲ್ಲ. ಸೋಲಿನ ಹೊಣೆಯನ್ನು ನಾವು ತೆಗೆದುಕೊಳ್ಳುವುದಿಲ್ಲ. ಏಕೆಂದರೆ ನಾವು ಯಾರೂ ತಪ್ಪು ಮಾಡಿಲ್ಲ. ಎಲ್ಲರೂ ಅವರವರ ಕೆಲಸ ಮಾಡಿದ್ದಾರೆ.
ಬಿಸಿಲು, ಮಳೆ ಎನ್ನದೇ, ನನ್ನ ಪರವಾಗಿ ನನಗಿಂತ ಹೆಚ್ಚು ಕೆಲಸವನ್ನು ಮಹಿಳಾ ಕಾರ್ಯಕರ್ತರು ಸೇರಿದಂತೆ ಎಲ್ಲರೂ ಮಾಡಿದ್ದಾರೆ. ಸೋತಿರಬಹುದು ಅದಕ್ಕಾಗಿ ದುಃಖವಿಲ್ಲ. ಮುಂದೆ ಚುನಾವಣೆಗಳು ಮತ್ತೆ ಬರುತ್ತವೆ. ಮತ್ತಷ್ಟು ಶಕ್ತಿ ತುಂಬುವ ಕೆಲಸವನ್ನು ನಾವು ಮಾಡುತ್ತೇವೆ ಎಂದರು.
Read More :Hosanagara Rain | ಹುಲಿಕಲ್ಲಿನಲ್ಲಿ ಅತ್ಯಧಿಕ 96 ಮಿ.ಮೀ. ಮಳೆ ದಾಖಲು, ಮತ್ತೆಲ್ಲೆಲ್ಲಿ ಎಷ್ಟು ಮಳೆಯಾಗಿದೆ ?

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.