ಶಿವಮೊಗ್ಗದಲ್ಲಿ ಗೀತಾ ಶಿವರಾಜ್‌ಕುಮಾರ್ ಗೆ ಸೋಲು, ಫಲಿತಾಂಶದ ಕುರಿತು ಏನಂದ್ರು ?

Written by malnadtimes.com

Published on:

SHIVAMOGGA | ಶಿವಮೊಗ್ಗ ಲೋಕಸಭಾ ಕ್ಷೇತ್ರದ ಫಲಿತಾಂಶಕ್ಕೆ ನಡೆದ ಚುನಾವಣೆ ಫಲಿತಾಂಶ ಇಂದು ಘೋಷಣೆಯಾಗಿದೆ. ಬಿಜೆಪಿ (BJP) ಅಭ್ಯರ್ಥಿ ಬಿ.ವೈ. ರಾಘವೇಂದ್ರ (B.Y Raghavendra) ಭರ್ಜರಿ ಗೆಲುವು ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಗೀತಾ ಶಿವರಾಜ್‌ಕುಮಾರ್ (Geetha Shivarajkumar) ಸೋಲನ್ನಪ್ಪಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿದ್ದ ಕೆ.ಎಸ್. ಈಶ್ವರಪ್ಪ (K.S Eshwarappa) 3ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು.

WhatsApp Group Join Now
Telegram Group Join Now
Instagram Group Join Now

ಗೀತಾ ಶಿವರಾಜ್‌ಕುಮಾರ್ ಪ್ರತಿಕ್ರಿಯೆ :

ಈ ಫಲಿತಾಂಶದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಗೀತಾ ಶಿವರಾಜ್‌ಕುಮಾರ್ ಪ್ರತಿಕ್ರಿಯಿಸಿದ್ದು, ‘ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರದ ಫಲಿತಾಂಶ ನಮ್ಮ ಕಡೆ ಆಗದಿರಬಹುದು. ಆದರೆ, ನಿಮ್ಮೂಂದಿಗಿನ ಈ ಪ್ರಯಾಣ ಮತ್ತು ನಮ್ಮ ಜನರ ಅಚಲವಾದ ಬೆಂಬಲಕ್ಕಾಗಿ ಸದಾ ಕೃತಜ್ಞರಾಗಿರುತ್ತೇವೆ. ಮತದಾರನ ಈ ನಿರ್ಣಯಕ್ಕೆ ತಲೆ ಬಾಗುತ್ತ, ನಾವು ಭವಿಷ್ಯದ ಬದಲಾವಣೆಗೆ ಪ್ರಯತ್ನಿಸುವುದನ್ನು ಎಂದಿನಂತೆಯೇ ಮುಂದುವರಿಸುತ್ತೇವೆ. ತಮ್ಮ ಅಚಲವಾದ ಬೆಂಬಲದೊಂದಿಗೆ ಪ್ರೋತ್ಸಾಹಿಸಿದ ಪ್ರತಿಯೊಬ್ಬ ಕಾರ್ಯಕರ್ತರು ಹಾಗು ವಿಶ್ವಾಸವಿಟ್ಟು ಮತ ಹಾಕಿದ ಪ್ರತಿಯೊಬ್ಬರಿಗೂ ತುಂಬು ಹೃದಯದ ಧನ್ಯವಾದ’ ಎಂದಿದ್ದಾರೆ.

Read More

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ | ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಗೆ ಭರ್ಜರಿ ಜಯ

Leave a Comment