ಹೊಸನಗರ ; ಇಲ್ಲಿನ ಗೇರುಪುರದ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯು ಈ ಬಾರಿಯೂ ಶೇ. 100 ಫಲಿತಾಂಶದೊಂದಿಗೆ ಹ್ಯಾಟ್ರಿಕ್ ಸಾಧನೆ ಮಾಡಿದೆ.
ನಿತಿನ್ ಎಂ.ಆರ್. ಎಂಬ ವಿದ್ಯಾರ್ಥಿ 625ಕ್ಕೆ 613 ಅಂಕ ಗಳಿಸುವ ಮೂಲಕ ಉತ್ತಮ ಸಾಧನೆ ಮಾಡಿ ಶಾಲೆಗೆ ಹಾಗೂ ಪೋಷಕರಿಗೆ ಕೀರ್ತಿ ತಂದಿದ್ದಾನೆ.
ಈ ಶಾಲೆಯ 17 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಹಾಗೂ 19 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.