ಟಿವಿ ರಿಮೋಟ್‍ಗಾಗಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಶರಣಾದ ಬಾಲಕಿ !

Written by Mahesha Hindlemane

Published on:

BHADRAVATHI ; ಟಿವಿ ರಿಮೋಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಬಾಲಕಿಯೊಬ್ಬಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಸೂಳೆಬೈಲಿನಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಕಲ್ಲಿಹಾಳ್ ಗ್ರಾಮದ ಸಹನಾ (16) ಆತ್ಮಹತ್ಯೆಗೆ ಶರಣಾದ ಬಾಲಕಿ. ಟಿವಿ ರಿಮೋಟ್‍ಗಾಗಿ ಇಬ್ಬರು ಮಕ್ಕಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಮೊಮ್ಮಗಳಿಗೆ ಅಜ್ಜಿ ಬೈದಿದ್ದಾರೆ. ಇದಕ್ಕಾಗಿ ಮನನೊಂದು ಬಾಲಕಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದು ಬಂದಿದೆ. ಸಹನಾ ಅಜ್ಜಿ ಮನೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು.

ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Leave a Comment