Ripponpete

ಟ್ರ್ಯಾಕ್‌ನಲ್ಲಿ ಸಿಡಿದ ರಿಪ್ಪನ್‌ಪೇಟೆ ಎಕ್ಸ್‌ಪ್ರೆಸ್: ರಾಷ್ಟ್ರಮಟ್ಟದಲ್ಲಿ ಆಯುಷ್ ಡಬಲ್ ಧಮಾಕಾ!

ತಮಿಳುನಾಡಿನ ಚೆನ್ನೈನಲ್ಲಿ ಆಯೋಜಿಸಲಾಗಿದ್ದ 41ನೇ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಶಿವಮೊಗ್ಗ ಜಿಲ್ಲೆ ರಿಪ್ಪನ್‌ಪೇಟೆಯ ಯುವ ಓಟಗಾರ ಆಯುಷ್ ಎಸ್.ಆರ್. ಅವಳಿ ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ.

Ayush Ripponpete 1

ರಿಪ್ಪನ್‌ಪೇಟೆ: ತಮಿಳುನಾಡಿನ ಚೆನ್ನೈನಲ್ಲಿ ಆಯೋಜಿಸಲಾಗಿದ್ದ 41ನೇ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಶಿವಮೊಗ್ಗ ಜಿಲ್ಲೆ ರಿಪ್ಪನ್‌ಪೇಟೆಯ ಯುವ ಓಟಗಾರ ಆಯುಷ್ ಎಸ್.ಆರ್. ಅವಳಿ ಪದಕಗಳನ್ನು ಮುಡಿಗೇರಿಸಿಕೊಂಡು ಗಮನಾರ್ಹ ಸಾಧನೆ ಮಾಡಿದ್ದಾರೆ. 20 ವರ್ಷದೊಳಗಿನವರ (U-20) ವಿಭಾಗದಲ್ಲಿ ಕಣಕ್ಕಿಳಿದಿದ್ದ ಅವರು, ರಾಜ್ಯಕ್ಕೆ ಹೆಮ್ಮೆ ತಂದಿದ್ದಾರೆ.

WhatsApp Group Join Now
Telegram Group Join Now
Instagram Group Join Now

​4×100 ಮೀಟರ್ ರಿಲೇ ಸ್ಪರ್ಧೆಯಲ್ಲಿ ತಂಡದೊಂದಿಗೆ ವೇಗದ ಓಟ ಪ್ರದರ್ಶಿಸಿದ ಆಯುಷ್ ಮೊದಲ ಸ್ಥಾನ ಪಡೆದು ಬಂಗಾರದ ಪದಕ ಜಯಿಸಿದರು. ಇದರ ಬೆನ್ನಲ್ಲೇ 200 ಮೀಟರ್ ವೈಯಕ್ತಿಕ ಓಟದ ಸ್ಪರ್ಧೆಯಲ್ಲಿಯೂ ಚುರುಕಿನ ಸಾಮರ್ಥ್ಯ ತೋರಿ ಎರಡನೇ ಸ್ಥಾನದೊಂದಿಗೆ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡರು. ಒಂದೇ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಎರಡು ಪದಕಗಳನ್ನು ಗಳಿಸುವ ಮೂಲಕ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ.

ಇಲ್ಲಿನ ನಿವಾಸಿಗಳಾದ ಎಸ್.ಎಂ. ರಾಘವೇಂದ್ರ ಹಾಗೂ ಮಂಜುಳಾ ದಂಪತಿಯ ಮಗನಾಗಿರುವ ಆಯುಷ್, ಕಳೆದ ಐದು ವರ್ಷಗಳಿಂದ ಕ್ರೀಡಾರಂಗದಲ್ಲಿ ಸಕ್ರಿಯರಾಗಿದ್ದು, ನಿರಂತರ ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದಾರೆ. ಇವರ ಸಾಧನೆಯ ಹಿಂದೆ ಪೋಷಕರ ನಿರಂತರ ಪ್ರೋತ್ಸಾಹ ಮತ್ತು ಬೆಂಬಲವಿದೆ.

​ಪ್ರಸ್ತುತ ಬೆಂಗಳೂರಿನ ಕಂಠೀರವ ಕ್ರೀಡಾಂಗಣದ DYES ಕ್ರೀಡಾ ವಸತಿನಿಲಯದಲ್ಲಿ ನೆಲೆಸಿರುವ ಇವರು, ಕೋಚ್ ಅಶೋಕ್ ಬಿ. ಮಂಟೂರ್ ಅವರ ಗರಡಿಯಲ್ಲಿ ಉನ್ನತ ಮಟ್ಟದ ತರಬೇತಿ ಪಡೆಯುತ್ತಿದ್ದಾರೆ. ವಿದ್ಯಾಭ್ಯಾಸದ ಜತೆಜತೆಗೆ ಕ್ರೀಡೆಯಲ್ಲೂ ದೊಡ್ಡ ಮಟ್ಟದ ಗುರಿ ಹೊಂದಿರುವ ಆಯುಷ್, ಮುಂದಿನ ದಿನಗಳಲ್ಲಿ ಭಾರತ ತಂಡವನ್ನು ಅಂತರರಾಷ್ಟ್ರೀಯ ವೇದಿಕೆಯಲ್ಲಿ ಪ್ರತಿನಿಧಿಸುವ ಕನಸು ಹೊತ್ತಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

error: Content is protected !!