ಹೊಸನಗರ

ರಸ್ತೆಯಲ್ಲಿ ಸಿಕ್ಕ ಚಿನ್ನದ ಉಂಗುರ ವಾರಸುದಾರರಿಗೆ ಹಸ್ತಾಂತರ; ಬ್ಯಾಂಕ್ ಸಿಬ್ಬಂದಿ ಕಾರ್ಯಕ್ಕೆ ಶ್ಲಾಘನೆ

ರಸ್ತೆಯಲ್ಲಿ ಬಿದ್ದಿದ್ದ ಚಿನ್ನದ ಉಂಗುರವನ್ನು ನಿಜವಾದ ಮಾಲೀಕರಿಗೆ ಸುರಕ್ಷಿತವಾಗಿ ಹಸ್ತಾಂತರಿಸಿ ಮಾನವೀಯತೆ ಮೆರೆದ ಕೋಡೂರು ಕೆನರಾ ಬ್ಯಾಂಕ್ ಸಿಬ್ಬಂದಿ ಆಶಾ ನರಸಿಂಹ ಅವರ ಕಾರ್ಯಕ್ಕೆ ಹೊಸನಗರದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

Asha Narasimha

ಹೊಸನಗರ: ರಸ್ತೆಯಲ್ಲಿ ಸಿಕ್ಕ ಚಿನ್ನದ ಉಂಗುರವನ್ನು ಅದರ ನಿಜವಾದ ವಾರಸುದಾರರಿಗೆ ಮರಳಿಸುವ ಮೂಲಕ ಹೊಸನಗರ ತಾಲೂಕಿನ ಕೋಡೂರು ಕೆನರಾ ಬ್ಯಾಂಕ್ ಶಾಖೆಯ ಸಿಬ್ಬಂದಿ ಆಶಾ ನರಸಿಂಹ ಪ್ರಾಮಾಣಿಕತೆ ಹಾಗೂ ಮಾನವೀಯತೆ ಮೆರೆದಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಆಶಾ ನರಸಿಂಹ ಎಂದಿನಂತೆ ಕರ್ತವ್ಯಕ್ಕೆಂದು ಬ್ಯಾಂಕ್‌ಗೆ ಬರುತ್ತಿದ್ದ ಸಂದರ್ಭದಲ್ಲಿ ರಸ್ತೆಯಲ್ಲಿ ಚಿನ್ನದ ಉಂಗುರವೊಂದು ಬಿದ್ದಿರುವುದು ಕಂಡುಬಂದಿದೆ. ತಕ್ಷಣವೇ ಅದನ್ನು ಜೋಪಾನವಾಗಿ ತೆಗೆದುಕೊಂಡ ಅವರು, ಉಂಗುರದ ನಿಜವಾದ ಮಾಲೀಕರನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾದರು. ಬಳಿಕ ಬಸ್ ನಿಲ್ದಾಣದ ಬಳಿ ಅಂಗಡಿ ನಡೆಸುತ್ತಿರುವ ಮಾಲತಿ ಸಂತೋಷ್ ಅವರಿಗೆ ಉಂಗುರವನ್ನು ಸುರಕ್ಷಿತವಾಗಿ ಹಸ್ತಾಂತರಿಸಿದ್ದಾರೆ.

ಕೋಡೂರು ಕೆನರಾ ಬ್ಯಾಂಕ್ ಶಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಆಶಾ ನರಸಿಂಹ, ಬ್ಯಾಂಕ್‌ಗೆ ಬರುವ ಪ್ರತಿಯೊಬ್ಬ ಗ್ರಾಹಕರೊಂದಿಗೂ ಸದಾ ನಗುಮುಖದಿಂದ ಹಾಗೂ ಆತ್ಮೀಯವಾಗಿ ಸ್ಪಂದಿಸುವ ಮೂಲಕ ಸ್ಥಳೀಯರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕರ್ತವ್ಯದ ಜೊತೆಗೆ ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿದಿರುವ ಇವರ ಕಾರ್ಯಕ್ಕೆ ಸಾರ್ವಜನಿಕ ವಲಯದಿಂದ ಹಾಗೂ ಬ್ಯಾಂಕ್ ಗ್ರಾಹಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]