ಕಾಳುಮೆಣಸು ಬೆಳೆದ ರೈತರಿಗೆ ಗುಡ್ ನ್ಯೂಸ್ ; ಬರೋಬ್ಬರಿ ₹ 1000 ಏರಿಕೆ ಸಾಧ್ಯತೆ

Written by Mahesha Hindlemane

Published on:

ಬೆಂಗಳೂರು ; ಕಾಳುಮೆಣಸು ಬೆಳೆದ ರೈತರಿಗೆ ಖುಷಿ ಸಮಯ ಬಂದಿದ್ದು, ಒಂದು ಕೆಜಿ ಕಾಳುಮೆಣಸಿನ ಬೆಲೆ ಬರೋಬ್ಬರಿ 1000 ರೂ.ಗೆ ಏರಿಕೆ ಸಾಧ್ಯತೆ ಎನ್ನಲಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಕಳೆದ ಎರಡು ವರ್ಷಗಳಿಂದ ಶೇ. 40 ರಷ್ಟು ದರ ಏರಿಕೆ ಕಂಡಿರುವ ಕರಿಮೆಣಸು ಪೂರೈಕೆ ಕೊರತೆ ಮತ್ತು ಬೇಡಿಕೆ ಹೆಚ್ಚಳದ ಪರಿಣಾಮ ಮತ್ತಷ್ಟು ದುಬಾರಿಯಾಗುವ ಸಾಧ್ಯತೆ ಇದೆ.

ಕಾಳುಮೆಣಸು ದರ ಕೆಜಿಗೆ 900 ರಿಂದ 1,100 ರೂಪಾಯಿವರೆಗೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕರ್ನಾಟಕದಲ್ಲಿ ಹವಾಮಾನ ಬದಲಾವಣೆ, ಅಕಾಲಿಕ ಮಳೆ, ಬೆಳೆಗೆ ರೋಗಬಾಧೆ ಇತ್ಯಾದಿ ಕಾರಣಗಳಿಂದ ಬೆಳೆ ಕುಸಿತವಾಗಿದೆ.

ಎರಡು ವರ್ಷಗಳ ಹಿಂದೆ ಕೆಜಿಗೆ ರೂ. 400-450 ರ ಆಸುಪಾಸಿನಲ್ಲಿದ್ದ ಮೆಣಸಿನ ಬೆಲೆ ಈಗ ರೂ. 700 ಕ್ಕೆ ಏರಿದೆ. ವಿಯೆಟ್ನಾಂ ಮತ್ತು ಬ್ರೆಜಿಲ್‌ನಂತಹ ದೇಶಗಳಲ್ಲಿ ಕೊಯ್ಲು ಕಡಿಮೆಯಾಗುವುದರಿಂದ ಜಾಗತಿಕ ಪೂರೈಕೆ ಬಿಕ್ಕಟ್ಟು ಉಂಟಾಗಿದ್ದು, ಬೆಲೆಗಳ ಮೇಲೆ ಒತ್ತಡ ಹೆಚ್ಚಿದೆ ಎಂದು ಕರ್ನಾಟಕ ಸಾಂಬಾರು ಸಂಘ ಮತ್ತು ಚಿಕ್ಕಮಗಳೂರು ಪ್ಲಾಂಟರ್ಸ್ ಅಸೋಸಿಯೇಷನ್‌ನ ಪ್ಲಾಂಟರ್ಸ್ ಅಸೋಸಿಯೇಷನ್‌ನ ಪ್ಲಾಂಟರ್ಸ್ ಹೇಳಿದ್ದಾರೆ.

ಬರಗಾಲದಿಂದಾಗಿ ಹೂಬಿಡುವಿಕೆ ವಿಳಂಬವಾಯಿತು ಮತ್ತು ನಂತರ ಹಠಾತ್ ಮಳೆಯಿಂದಾಗಿ ಬೆಳೆಯ ಮೇಲೆ ಪರಿಣಾಮ ಬೀರಿತು. ಇದು ಒಟ್ಟಾರೆ ಉತ್ಪಾದನೆ ಮೇಲೆ ಮೇಲೆ ಪರಿಣಾಮ ಬೀರಿತ್ತು. ಇದರಿಂದಾಗಿ ಪ್ರಸಕ್ತ ಋತುವಿನಲ್ಲಿ ಉತ್ಪಾದನೆಯು ಶೇ. 40 ರಷ್ಟು ಕುಸಿತ ಕಂಡಿದೆ ಎಂದು ಕರ್ನಾಟಕ ಸ್ಪೈಸ್ ಅಸೋಸಿಯೇಷನ್​ನ ಚಂದ್ರಶೇಖರ ರೆಡ್ಡಿ ತಿಳಿಸಿದ್ದಾರೆ.

ಕಾಳುಮೆಣಸು ಬೆಳೆಗೆ ತೇವಾಂಶವುಳ್ಳ ಗಾಳಿ, ನೆರಳು ಪ್ರದೇಶ ಮತ್ತು ಚೆನ್ನಾಗಿ ನೀರಿನ ಅಂಶವಿರುವ ಮಣ್ಣು ಬೇಕಾಗುತ್ತದೆ. ಪಶ್ಚಿಮ ಘಟ್ಟಗಳು ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಕರಿಮೆಣಸು ಉತ್ಪಾದನೆಗೆ ಪೂರಕ ವಾತಾವರಣ ಇವೆ.

Leave a Comment