RIPPONPETE ; ಶಿವಮೊಗ್ಗ ಜಿಲ್ಲಾ ಮಟ್ಟದ 14 ವರ್ಷದ ವಯೋಮಿತಿ ಒಳಗಿನ ಪ್ರಾಥಮಿಕ ಶಾಲಾ ಕ್ರೀಡಾಕೂಟದಲ್ಲಿ ಗುಡ್ ಶಫರ್ಡ್ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು 4×100 ಮೀ. ರಿಲೇ ಓಟದ ಸ್ಪರ್ಧೆಯಲ್ಲಿ ಪ್ರಥಮ (ಧನುಷ್ ಎಸ್ ಡಿ, ಪ್ರಥಮ್ ಹೆಚ್, ನಿತಿನ್ ಎ, ಎಲ್ದೋಸ್ ಬಿನು) ಹಾಗೂ 600 ಮೀ. ಓಟದ ಸ್ಪರ್ಧೆಯಲ್ಲಿ ಪ್ರಥಮ( ಧನುಷ್ ಎಸ್.ಡಿ), ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ ಹಾಗೂ 100 ಮೀ. ತೃತೀಯ (ಧನುಷ್ ಎಸ್.ಡಿ. ), 200 ಮೀ. (ಪ್ರಥಮ್ ಹೆಚ್) ತೃತೀಯ ಸ್ಥಾನ ಗಳಿಸಿದ್ದಾರೆ.
ಅಭಿನಂದನೆ :
ರಿಪ್ಪನ್‌ಪೇಟೆ ಗುಡ್ ಶಫರ್ಡ್ ಚರ್ಚ್‌ನ ಧರ್ಮ ಗುರು ಹಾಗೂ ಶಾಲೆಯ ಕಾರ್ಯದರ್ಶಿ ರೆ. ಫಾ. ಬಿನೋಯ್ ಶಾಲಾ ಸಲಹಾ ಸಮಿತಿ ಹಾಗೂ ಪೋಷಕ ಸಮಿತಿಯವರು, ಮುಖ್ಯೋಪಧ್ಯಾಯರು, ದೈಹಿಕ ಶಿಕ್ಷಕರು ಹಾಗೂ ಸಹ ಶಿಕ್ಷಕರು, ಶಿಕ್ಷಣ ಇಲಾಖೆ ಸಿಬ್ಬಂದಿ ವರ್ಗದವರು, ಅಡುಗೆ ಸಿಬ್ಬಂದಿಗಳು, ಹಳೆ ವಿದ್ಯಾರ್ಥಿಗಳು, ಗ್ರಾಮಸ್ಥರು ಮಕ್ಕಳ ಸಾಧನೆಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.