Accident

ಸರ್ಕಾರಿ ಬಸ್ ಹಾಗೂ ಪಿಕಪ್ ವಾಹನ ಮುಖಾಮುಖಿ ಡಿಕ್ಕಿ

ಮೂಡಿಗೆರೆ ; ಸರ್ಕಾರಿ ಬಸ್ ಹಾಗೂ ಪಿಕಪ್ ವಾಹನ ಮುಖಾಮುಖಿ ಡಿಕ್ಕಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾಂದಿ ಬಳಿ ಶುಕ್ರವಾರ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಪಿಕಪ್ ವಾಹನ ಬಸ್ಸಿನ ಒಂದು ಬದಿಗೆ ತಾಗಿಕೊಂಡು ಹೋದ ಪರಿಣಾಮ, ಪಿಕಪ್ ವಾಹನದ ಒಂದು ಭಾಗ ಮುಂದಿನ ಗಾಜಿಗೆ ಸಿಲುಕಿ ಬಸ್ಸಿನಲ್ಲಿಯೇ ಉಳಿಯಿತು. ಅದೃಷ್ಟವಶಾತ್, ಪಿಕಪ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಅಪಘಾತದಲ್ಲಿ ಗಂಭೀರ ಗಾಯಗಳೇನೂ ಸಂಭವಿಸಿಲ್ಲ.

ಪ್ರಾಥಮಿಕ ಮಾಹಿತಿ ಪ್ರಕಾರ, ನಿದ್ದೆಗಣ್ಣಿನಲ್ಲಿದ್ದ ಪಿಕಪ್ ವಾಹನದ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಧರ್ಮಸ್ಥಳದಿಂದ ಚಿಕ್ಕಬಳ್ಳಾಪುರಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ಸಿಗೆ ಪಿಕಪ್ ವಾಹನ ತಾಗಿಕೊಂಡು ಹೋದ ಪರಿಣಾಮ ಪಿಕಪ್ ವಾಹನದಲ್ಲಿದ್ದ ತರಕಾರಿ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿತು.

ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ದೂರು ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]