ಕೊಪ್ಪ ; ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ಸೊಂದು ರಸ್ತೆಯ ಕೆಳಭಾಗದಲ್ಲಿದ್ದ ಮನೆಯ ಮೇಲೆ ಪಲ್ಟಿಯಾಗಿ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಲದುರ್ಗ ಗ್ರಾಮದ ಬಳಿ ನಡೆದಿದ್ದು, ಬಸ್ಸಿನಲ್ಲಿದ್ದವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದರೇ, ಮನೆಯ ಛಾವಣಿಗೆ ಹಾನಿಯಾಗಿದೆ.
ಬೆಂಗಳೂರಿನಿಂದ ಶೃಂಗೇರಿ ಮಾರ್ಗವಾಗಿ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಜಲದುರ್ಗ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಸಮೀಪದ ಕೆಳಭಾಗದಲ್ಲಿನ ಮನೆಯ ಮೇಲೆ ಉರುಳಿ ಬಿದ್ದಿದೆ.

ಬಸ್ಸಿನಲ್ಲಿ 50 ಜನ ಪ್ರಯಾಣಿಕರು ಇದ್ದು 20 ಜನರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಜಯಪುರ ಮತ್ತು ಕೊಪ್ಪ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡ ಭೇಟಿ ನೀಡಿ ಮಾಹಿತಿ ಪಡೆದರು.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
ಈ ಘಟನೆ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

