ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದು ರಸ್ತೆ ಬದಿಗೆ ಜಾರಿದ ಸರ್ಕಾರಿ ಬಸ್ !

Written by malnadtimes.com

Updated on:

ಮೂಡಿಗೆರೆ ; ಭಾರೀ ಮಳೆಯಿಂದಾಗಿ ನಿಯಂತ್ರಣ ತಪ್ಪಿದ ಸರ್ಕಾರಿ ಬಸ್ ಕಾರಿಗೆ ಡಿಕ್ಕಿ ಹೊಡೆದು ರಸ್ತೆ ಬದಿಗೆ ಜಾರಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಡವನದಿಣ್ಣೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಮೂಡಿಗೆರೆ, ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಣಕಲ್ ಹಾಗೂ ಇನ್ನಿತರ ಕಡೆ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಸಂದರ್ಭದಲ್ಲೇ ಈ ಅಪಘಾತ ಸಂಭವಿಸಿದೆ.

ಬಸ್ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ಎದುರಿನಿಂದ ಬಂದ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ನಂತರ ರಸ್ತೆ ಬದಿಗೆ ಜಾರಿದೆ. ಈ ಅಪಘಾತದಲ್ಲಿ ಕಾರು ಚಾಲಕ ಸೇರಿ ಬಸ್‌ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅದೃಷ್ಟವಶಾತ್ ಪ್ರಾಣಹಾನಿ ಸಂಭವಿಸಿಲ್ಲ.

ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Leave a Comment