ಮುಖ್ಯ ವಿಷಯಕ್ಕೆ ಹೋಗಿ
malnad times
ಮುಖ್ಯ ಮೆನು
  • ಶಿವಮೊಗ್ಗ ಸುದ್ದಿ
  • ಚಿಕ್ಕಮಗಳೂರು ಸುದ್ದಿ
  • ಅಪರಾಧ ಸುದ್ದಿ
  • ವೆಬ್ ಕಥೆಗಳು
ಮುಖಪುಟ › Shivamogga › ಸರ್ಕಾರಿ ನೌಕರರ ಕ್ರೀಡಾಕೂಟದ ಟ್ರೋಫಿ, ಲಾಂಛನ ಬಿಡುಗಡೆ ; ಸಿ.ಎಸ್.ಷಡಾಕ್ಷರಿ
Shivamogga

ಸರ್ಕಾರಿ ನೌಕರರ ಕ್ರೀಡಾಕೂಟದ ಟ್ರೋಫಿ, ಲಾಂಛನ ಬಿಡುಗಡೆ ; ಸಿ.ಎಸ್.ಷಡಾಕ್ಷರಿ

Mahesh Hindlemaneಪ್ರಕಟಣೆ: 16 ಮೇ 2025, 7:40 ಅಪರಾಹ್ನ · 6 ನಿಮಿಷ ಓದು
ಹಂಚಿಕೊಳ್ಳಿವಾಟ್ಸ್‌ಆ್ಯಪ್ಫೇಸ್‌ಬುಕ್ಟೆಲಿಗ್ರಾಮ್ಎಕ್ಸ್

ಶಿವಮೊಗ್ಗ ; ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಮೇ 18ರಿಂದ 20ರವರೆಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಹೇಳಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಅವರು ಇಂದು ನೌಕರರ ಸಂಘದ ಸಭಾಂಗಣದಲ್ಲಿ ಕ್ರೀಡಾಕೂಟದ ಲಾಂಛನ, ಕ್ರೀಡಾ ಸಮವಸ್ತ್ರ ಹಾಗೂ ಟ್ರೋಫಿ ಬಿಡುಗಡೆಗೊಳಿಸಿ, ಪತ್ರಿಕಾ ಪ್ರತಿನಿಧಿಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು. ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಈಗಾಗಲೇ ಸಕಲ ರೀತಿಯ ಸಿದ್ಧತೆಗಳು ಪೂರ್ಣಗೊಂಡಿವೆ ಎಂದವರು ನುಡಿದರು.

Download Adike Market App

ಕ್ರೀಡಾಕೂಟದಲ್ಲಿ ಭಾಗವಹಿಸುವಂತಹ ಎಲ್ಲಾ 15,000 ನೌಕರ ಕ್ರೀಡಾಪಟುಗಳಿಗೆ ಟ್ರಾಕ್ಶೂಟನ್ನು ನೋಂದಣಿ ಸಂದರ್ಭದಲ್ಲಿಯೇ ನೀಡಲಾಗುವುದು. ಸ್ಪರ್ಧೆಯಲ್ಲಿ ಎಲ್ಲಾ ವಿಜೇತರಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನವಾಗಿ ಆಕರ್ಷಕ ಟ್ರೋಫಿಯನ್ನು ಕೊಡಲಾಗುತ್ತಿದೆ. ಇದೇ ಪ್ರಥಮ ಬಾರಿಗೆ ಅತ್ಯಂತ ಆಕರ್ಷಕವಾದ ಟ್ರೋಫಿಯನ್ನು ಕ್ರೀಡಾಪಟುಗಳಿಗೆ ನೀಡಲು ಉದ್ದೇಶಿಸಲಾಗಿದೆ. ಅಲ್ಲದೇ ವಿಜೇತ ಸ್ಪರ್ಧಾಳುಗಳಿಗೆ ಪ್ರಮಾಣಪತ್ರ, ಟ್ರೋಫಿಯ ಜೊತೆಗೆ ಸಫಾರಿ ಕಂಪನಿಯ ಟ್ರಾಲಿ ಬ್ಯಾಗನ್ನು ಕೂಡ ನೀಡಲಾಗುತ್ತಿದೆ ಎಂದು ಹೇಳಿದರು.

Get Adike Market Price App
ಇದನ್ನೂ ಓದಿರಿಪ್ಪನ್‌ಪೇಟೆ : ಅಖಂಡ ಭಾರತ ಸಂಕಲ್ಪ ದಿನಾಚರಣೆ

ಮುಖ್ಯಮಂತ್ರಿಗಳು ಅಂದು ಮಧ್ಯಾಹ್ನ 3 ಗಂಟೆಗೆ ಶಿವಮೊಗ್ಗ ನಗರಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಲಿದ್ದಾರೆ. ನಾಲ್ಕು ಗಂಟೆಗೆ ಸಮಾರಂಭಕ್ಕೆ ಆಗಮಿಸಲಿದ್ದು ಸಮಯಕ್ಕೆ ಸರಿಯಾಗಿ ಕಾರ್ಯಕ್ರಮ ಆರಂಭವಾಗಲಿದೆ. ಉಪಮುಖ್ಯಮಂತ್ರಿಗಳು ಕೂಡ ರಸ್ತೆ ಮಾರ್ಗವಾಗಿ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಅಂತೆಯೇ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಶಾಸಕರು ಹಾಗೂ ಚುನಾಯಿತ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗಣ್ಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಮುಖ್ಯಮಂತ್ರಿಗಳು ಅಧಿಕಾರವಹಿಸಿಕೊಂಡ ನಂತರ ಇದೇ ಪ್ರಥಮ ಬಾರಿಗೆ ಶಿವಮೊಗ್ಗ ನಗರಕ್ಕೆ ಆಗಮಿಸುತ್ತಿದ್ದು ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷನಾದ ನಂತರ ನಾಲ್ಕು ಬಾರಿ ನಮ್ಮ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು ಒಂದು ವಿಶೇಷವಾಗಿದೆ ಎಂದ ಅವರು, ಮೇ 19ರಂದು ಸಂಜೆ ನೆಹರು ಕ್ರೀಡಾಂಗಣದಲ್ಲಿ ಜನಪದ ದಿಬ್ಬಣ ಕಾರ್ಯಕ್ರಮ ನಡೆಯಲಿದ್ದು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಜಗದೀಶ್ ಹಾಗೂ ಶಿವಮೊಗ್ಗ ಕೇಂದ್ರ ವಲಯ ಸಂಪರ್ಕ ಮತ್ತು ಕಟ್ಟಡದ ಮುಖ್ಯ ಇಂಜಿನಿಯರ್ ಬಿ.ವಿ ಜಗದೀಶ್ ಇವರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ. ಮುಖ್ಯ ಅತಿಥಿಗಳಾಗಿ ಸಿದ್ದಲಿಂಗರೆಡ್ಡಿ ಶಾಹಿ ಎಕ್ಸ್‌ಪೋರ್ಟ್ ನ ವ್ಯವಸ್ಥಾಪಕ ಲಕ್ಷ್ಮಣ್, ಸೂಡಾ ಆಯುಕ್ತ ವಿಶ್ವನಾಥ್ ಅವರು ಆಗಮಿಸಲಿದ್ದಾರೆ ಎಂದರು.

ಮೇ 20ರಂದು ಕುವೆಂಪು ರಂಗಮಂದಿರದಲ್ಲಿ ನಡೆಯುವ ಸಮಾರೋಪ ಸಮಾರಂಭದಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಹಾಗೂ ಮಾಜಿ ಶಾಸಕರುಗಳಾದ ಆರ್ ಮಂಜುನಾಥ್ ನೆರವೇರಿಸಲಿದ್ದಾರೆ ಇವರೊಂದಿಗೆ ಬಿಸಿಬಿ ಬ್ಯಾಂಕ್ ಉಪಾಧ್ಯಕ್ಷ ಎಸ್ ಕೆ ಮರಿಯಪ್ಪ ಕಾಂಗ್ರೆಸ್ ಮುಖಂಡ ಎಂ ಶ್ರೀಕಾಂತ್ ಸೇರಿದಂತೆ ಅನೇಕ ಮುಖಂಡರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿಮನೆ ಕಳೆದುಕೊಂಡ ಬಡವರಿಗೆ ಪರಿಹಾರ, ಪರ್ಯಾಯ ಮನೆ ಕಲ್ಪಿಸಿ: ಶಾಸಕ ಚನ್ನಬಸಪ್ಪ ಆಗ್ರಹ

ಕ್ರೀಡಾಕೂಟದಲ್ಲಿ ಭಾಗವಹಿಸುವಂತಹ ಎಲ್ಲಾ ನೌಕರ ಬಂಧುಗಳಿಗೆ ಊಟ, ವಸತಿ ವ್ಯವಸ್ಥೆಯನ್ನು ಅತ್ಯಂತ ಅಚ್ಚುಕಟ್ಟಾಗಿ ಮಾಡಲಾಗಿದೆ ಎಲ್ಲರಿಗೂ ಕೂಡ ಅವರ ವಾಟ್ಸಪ್ ಗಳಿಗೆ ಕ್ಯೂಆರ್ ಕೋಡ್ ನ್ನು ಹಾಕಲಾಗುತ್ತಿದೆ ಅದರಲ್ಲಿ ಎಲ್ಲ ಸಮಗ್ರ ಮಾಹಿತಿ ದೊರೆಲಿದೆ ಯಾರಿಗೂ ಕೂಡ ಗೊಂದಲ ಆಗದಂತೆ ಮತ್ತು ಎಲ್ಲಿಯೂ ತೊಂದರೆ ಆಗದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ತಿಳಿಸಿದರು.

ಕ್ರೀಡಾಪಟುಗಳು ತಂಗುವ ಮತ್ತು ಕ್ರೀಡಾಕೂಟದ ಸ್ಥಳಕ್ಕೆ ಸಂಚರಿಸಲು ಅನುಕೂಲವಾಗುವಂತೆ 40 ಬಸ್‌ಗಳ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ನೌಕರ ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್ ಕುಮಾರ್, ಕಾರ್ಯದರ್ಶಿ ಪಾಪಣ್ಣ, ಸಿದ್ಬಸಪ್ಪ, ದಿನೇಶ್, ರಂಗನಾಥ್, ಆರ್.ಮಾರುತಿ ಸೇರಿದಂತೆ ನೌಕರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಹೊಸನಗರದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ | ಯೋಜನೆಗೆ ಅವಕಾಶ ಕಲ್ಪಿಸಿದ ಹೊಸನಗರ ಕತ್ತಲೆಯಲ್ಲಿ ಮುಳುಗಿದೆ : ಆರಗ ಜ್ಞಾನೇಂದ್ರ
Post Views: 14
ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>

ಇನ್ನಷ್ಟು ಸುದ್ದಿಗಳು

InShot 20260810 212559613
Hosanagara

ರಿಪ್ಪನ್‌ಪೇಟೆ : ಅಖಂಡ ಭಾರತ ಸಂಕಲ್ಪ ದಿನಾಚರಣೆ

10 ಆಗಸ್ಟ್ 20263 ನಿಮಿಷ ಓದು
ಮನೆ ಕಳೆದುಕೊಂಡ ಬಡವರಿಗೆ ಪರಿಹಾರ, ಪರ್ಯಾಯ ಮನೆ ಕಲ್ಪಿಸಿ: ಶಾಸಕ ಚನ್ನಬಸಪ್ಪ ಆಗ್ರಹ – mt channabasappa
Shivamogga

ಮನೆ ಕಳೆದುಕೊಂಡ ಬಡವರಿಗೆ ಪರಿಹಾರ, ಪರ್ಯಾಯ ಮನೆ ಕಲ್ಪಿಸಿ: ಶಾಸಕ ಚನ್ನಬಸಪ್ಪ ಆಗ್ರಹ

10 ಆಗಸ್ಟ್ 20263 ನಿಮಿಷ ಓದು
InShot 20260810 181216209
Hosanagara

ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಹೊಸನಗರದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ | ಯೋಜನೆಗೆ ಅವಕಾಶ ಕಲ್ಪಿಸಿದ ಹೊಸನಗರ ಕತ್ತಲೆಯಲ್ಲಿ ಮುಳುಗಿದೆ : ಆರಗ ಜ್ಞಾನೇಂದ್ರ

10 ಆಗಸ್ಟ್ 20269 ನಿಮಿಷ ಓದು

Malnad Times

ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಸ್ಥಳೀಯ ಸುದ್ದಿಗೆ ಸ್ವತಂತ್ರ ಮತ್ತು ವಿಶ್ವಾಸಾರ್ಹ ಕನ್ನಡ ವೇದಿಕೆ.

ವಿಭಾಗಗಳು

ನಮ್ಮ ಬಗ್ಗೆ

  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ಸಂಪಾದಕೀಯ ನೀತಿ
  • ಗೌಪ್ಯತಾ ನೀತಿ
© 2026 ಮಲ್ನಾಡ್ ಟೈಮ್ಸ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.