BANGALORE ; ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದಾರೆ. ದೆಹಲಿ ಏಮ್ಸ್ ಆಸ್ಪತ್ರೆಗೆ ಇಂದು ರಾತ್ರಿ ಮನಮೋಹನ್ ಸಿಂಗ್ ಅವರನ್ನು ದಾಖಲಿಸಲಾಗಿತ್ತು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮನಮೋಹನ್ ಸಿಂಗ್ ಕೊನೆಯುಸಿರೆಳೆದಿದ್ದಾರೆ. ಆಸ್ಪತ್ರೆಗೆ ಸೇರಿಸುವಾಗಲೇ ಅವರ ಸ್ಥಿತಿ ಚಿಂತಾಜನಕವಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇದರ ಬೆನ್ನಲ್ಲೇ ನಾಳೆ ಕರ್ನಾಟಕ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ನಾಳೆ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಇರಲಿದೆ.
ಮನಮೋಹನ ಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಜೊತೆಗೆ ನಾಳೆ (ಡಿ. 27)ರಂದು ಸರ್ಕಾರಿ ರಜೆ ಘೋಷಿಸಲಾಗಿದೆ. ಎಲ್ಲ ಸರ್ಕಾರಿ ಕಾರ್ಯಕ್ರಮಗಳನ್ನು ಈಗಾಗಲೇ ಒಂದು ವಾರಗಳ ಕಾಲ ರದ್ದು ಮಾಡೋದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.