Bangalore

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ; ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ

BANGALORE ; ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದಾರೆ. ದೆಹಲಿ ಏಮ್ಸ್‌ ಆಸ್ಪತ್ರೆಗೆ ಇಂದು ರಾತ್ರಿ ಮನಮೋಹನ್‌ ಸಿಂಗ್‌ ಅವರನ್ನು ದಾಖಲಿಸಲಾಗಿತ್ತು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮನಮೋಹನ್‌ ಸಿಂಗ್‌ ಕೊನೆಯುಸಿರೆಳೆದಿದ್ದಾರೆ. ಆಸ್ಪತ್ರೆಗೆ ಸೇರಿಸುವಾಗಲೇ ಅವರ ಸ್ಥಿತಿ ಚಿಂತಾಜನಕವಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇದರ ಬೆನ್ನಲ್ಲೇ ನಾಳೆ ಕರ್ನಾಟಕ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ನಾಳೆ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಇರಲಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಮನಮೋಹನ ಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಜೊತೆಗೆ ನಾಳೆ (ಡಿ. 27)ರಂದು ಸರ್ಕಾರಿ ರಜೆ ಘೋಷಿಸಲಾಗಿದೆ. ಎಲ್ಲ ಸರ್ಕಾರಿ ಕಾರ್ಯಕ್ರಮಗಳನ್ನು ಈಗಾಗಲೇ ಒಂದು ವಾರಗಳ ಕಾಲ ರದ್ದು ಮಾಡೋದಾಗಿ ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ತಿಳಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>