ಹೊಸನಗರ

ಧಾರ್ಮಿಕ ಕ್ಷೇತ್ರಗಳ ಸರ್ವಾಂಗೀಣಾಭಿವೃದ್ದಿಗೆ ಸರ್ಕಾರದಿಂದ ಹೆಚ್ಚಿನ ಒತ್ತು ; ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ : ಕಾಂತರ ಚಿತ್ರದಿಂದಾಗಿ ಧಾರ್ಮಿಕ ಕ್ಷೇತ್ರಗಳಿಗೆ ಯುವಕರು ಹೆಚ್ಚು ನಂಬಿಕೆ ಇಡುವಂತಾಗಿದೆ. ಧಾರ್ಮಿಕ ಕ್ಷೇತ್ರಗಳಲ್ಲಿ ಮೂಲಭೂತ ಸೌಲಭ್ಯಗಳ ಕಡೆ ಹೆಚ್ಚು ಒತ್ತು ನೀಡುವುದರೊಂದಿಗೆ ಹಂತ ಹಂತವಾಗಿ ಆಭಿವೃದ್ದಿಗೆ ಸರ್ಕಾರದಿಂದ ಅನುದಾನ ಬಿಡುಗಡೆಗೊಳಿಸುವುದಾಗಿ ಶಾಸಕ, ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಭರವಸೆ ನೀಡಿದರು.

WhatsApp Group Join Now
Telegram Group Join Now
Instagram Group Join Now

ಇತಿಹಾಸ ಪ್ರಸಿದ್ದ ಶ್ರೀ ಗುಳಿಗುಳಿಶಂಕರದ ಶ್ರೀಶಂಕರೇಶ್ವರ ದೇವಸ್ಥಾನದ 11ನೇ ವರ್ಷದ ಪ್ರತಿಷ್ಟಾ ವರ್ಧಂತ್ಯುತ್ಸವ ಧರ್ಮ ಸಮಾರಂಭ ಕಾರ್ಯಕ್ರಮದಲ್ಲಿ ಮುಖ್ಯ ಆತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ದೇವಸ್ಥಾನ ಸೇವಾ ಸಮಿತಿಯವರು ಮನವಿ ಪತ್ರದಲ್ಲಿ ಕೋರಿದಂತೆ ತುರ್ತಾಗಿ ಚರಂಡಿ ಮತ್ತು ಸಾರ್ವಜನಿಕರ ಶೌಚಾಲಯ ಸೇರಿದಂತೆ ಸಂಪರ್ಕ ರಸ್ತೆಯ ಅಭಿವೃದ್ಧಿ ಮಾಡುವ ಭರವಸೆ ನೀಡಿ ಉಳಿದಂತೆ ವಿದ್ಯುತ್ ಪರಿವರ್ತಕ (ಟಿ.ಸಿ) ಅಳವಡಿಕೆಗೆ ಹೆಚ್ಚು ಒತ್ತಡವಿದೆ. ಆದರೆ ಈಗ ಬೇಸಿಗೆಯಾಗಿರುವ ಕಾರಣ ಟಿ.ಸಿಗಳು ಸಕಾಲದಲ್ಲಿ ಸಿಗುತ್ತಿಲ್ಲದ ಕಾರಣ ತಾವುಗಳು ತಾಳ್ಮೆ ವಹಿಸಬೇಕು ಎಂದು ಮನವರಿಕೆ ಮಾಡಿ, ಮುಂದಿನ ದಿನಗಳಲ್ಲಿ ಟಿ.ಸಿಯನ್ನು ಸಹ ಹಾಕಿಸುವುದಾಗಿ ಭರವಸೆ ನೀಡಿ ಧರ್ಮ ಧಾರ್ಮಿಕ ಅಚರಣೆಗಳಿಂದ ಯುವಕ ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆಂದು ಹೇಳಿ ಗ್ರಾಮದಲ್ಲಿ ಗ್ರಾಮ ದೇವರುಗಳ ಪೂಜೆಯನ್ನು ಶ್ರದ್ದಾಭಕ್ತಿಯಿಂದ ಆಚರಿಸಿ ಎಂದರು.

ದಿವ್ಯಸಾನ್ನಿಧ್ಯವನ್ನು ಹಾರ‍ನಹಳ್ಳಿ ರಾಮಲಿಂಗೇಶ್ವರಮಠದ ವಿಶ್ವರಾಧ್ಯಶಿವಾಚಾರ್ಯ ಮಹಾಸ್ವಾಮಿಗಳು ವಹಿಸಿ ಆಶೀರ್ವಚನ ನೀಡಿದರು.

ಸಭೆಯ ಅಧ್ಯಕ್ಷತೆಯನ್ನು ದೇವಸ್ಥಾನ ಸೇವಾ ಸಮಿತಿಯ ಅಧ್ಯಕ್ಷ ವಾಸುದೇವ್‌ಶೆಟ್ ವಹಿಸಿದ್ದರು. ಹೊಸನಗರ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಬಿ.ಜೆ.ಚಂದ್ರುಮೌಳಿ, ಬೆಂಗಳೂರಿನ ಸೀತಾ ನಾಗರಾಜ ಕುಮಾರ್, ದೇವಸ್ಥಾನ ಸೇವಾ ಸಮಿತಿ ಕಾರ್ಯದರ್ಶಿ ಅವಡೆ ಶಿವಪ್ಪ, ಇನ್ನಿತರರು ಮುಖ್ಯ ಅತಿಥಿಗಳಾಗಿ ಭಾಗಹಿಸಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಶಿವಮೊಗ್ಗ ಅಂದಾಲ್ಸ್ ರಾಘುಭಟ್ ಇವರ ಪುರೋಹಿತ ತಂಡದವರ ಮತ್ತು ದೇವಸ್ಥಾನದ ಪ್ರಧಾನ ಅರ್ಚಕರ ನೇತೃತ್ವದಲ್ಲಿ ಶುಕ್ರವಾರ ಬೆಳಗ್ಗೆ 9 ಗಂಟೆಗೆ ಗುಳಿಗುಳಿಶಂಕರೇಶ್ವರ ಸ್ವಾಮಿಗೆ ಕುಂಭಾಭಿಷೇಕ ಮತ್ತು ಕಲಾಹೋಮ ಹಾಗೂ ವಿಶೇಷ ಅಲಂಕಾರ ಪೂಜೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿತರಣೆ. ನಂತರ ಸಾಮೂಹಿಕ ಅನ್ನಸಂತರ್ಪಣೆ ಜರುಗಿತು.

ಯಶೋಧಮ್ಮ ಪ್ರಾರ್ಥಿಸಿದರು. ನಾಗರಾಜ ಸ್ವಾಗತಿಸಿದರು. ಅವಡೆ ಶಿವಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!