Ripponpete

ಸರ್ಕಾರಿ ಶಾಲೆಯ ಮಕ್ಕಳೇ ಪ್ರತಿಭಾವಂತರು ; ಗೋಪಾಲಕೃಷ್ಣ ಬೇಳೂರು

ರಿಪ್ಪನ್‌ಪೇಟೆ ; ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆದ ಮಕ್ಕಳೇ ಪ್ರತಿಭಾವಂತರು. ಖಾಸಗಿ ಶಾಲೆಗಳ ಶಿಕ್ಷಣಕ್ಕಿಂತ ಸರ್ಕಾರಿ ಶಾಲೆಯಲ್ಲಿ ನೀಡುತ್ತಿರುವ ಶಿಕ್ಷಣವು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವುದು ಹಾಗೂ ಉನ್ನತ ಉದ್ಯೋಗಗಳನ್ನು ಪಡೆಯುವುದಕ್ಕೆ ಸಹಕಾರಿಯಾಗುತ್ತದೆಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ರಿಪ್ಪನ್‌ಪೇಟೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಮಕ್ಕಳು ಶಿಕ್ಷಣ ಕ್ಷೇತ್ರಕ್ಕೆ ಐತಿಹಾಸಿಕ ಮಟ್ಟದ ಯೋಜನೆಗಳು ಮತ್ತು ಅನುದಾನಗಳನ್ನು ನೀಡುತ್ತಿವೆ ಎಂದರು.

ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಆಯ್ಕೆಯಾಗಿರುವ ಬುದ್ದಿವಂತ ಹಾಗೂ ತರಬೇತಿ ಪಡೆದ ಶಿಕ್ಷಕರಿಂದ ದೊರೆಯುತ್ತಿರುವ ಬಲಿಷ್ಠ ಶಿಕ್ಷಣ ವ್ಯವಸ್ಥೆಯೇ ಸರ್ಕಾರಿ ಶಾಲಾ ಮಕ್ಕಳ ಯಶಸ್ಸಿನ ಮೂಲವಾಗಿದೆ ಇಂತಹ ವಿದ್ಯಾರ್ಥಿಗಳು ಮುಂದಾಗಿ ಉನ್ನತ ಹುದ್ದೆಗಳನ್ನು ಅಲಂಕರಿಸಿ ಸಮಾಜದ ಮುಖ್ಯವಾಹಿನಿಗೆ ಬಂದು ರಾಷ್ಟ್ರದ ಅಭಿವೃದ್ದಿಗೆ ಶಕ್ತಿ ತುಂಬುತ್ತಿದ್ದಾರೆಂದು ಹೇಳಿ, ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಸಂಪೂರ್ಣ ಉಚಿತವಾಗಿದ್ದು ಒಂದರಿಂದ ಹತ್ತನೇ ತರಗತಿವರಗೆ ಪಠ್ಯಪುಸ್ತಕ ಸಮವಸ್ತ್ರ, ಶೂ ಮಧ್ಯಾಹ್ನದ ಬಿಸಿಯೂಟ, ಹಾಲು, ಮೊಟ್ಟೆ ಹಾಗೂ ಪೌಷ್ಟಿಕ ಆಹಾರಗಳನ್ನು ನೀಡಲಾಗುತ್ತದೆ. ಈ ಸೌಲಭ್ಯಗಳ ಸದ್ಬಳಕೆ ಮಾಡಿಕೊಂಡು ವಿದ್ಯಾರ್ಥಿಗಳು ಶಿಸ್ತು ಪ್ರಾಮಾಣಿಕತೆ ಮತ್ತು ನಿಷ್ಟೆಯೊಂದಿಗೆ ವ್ಯಾಸಂಗ ಮಾಡುವ ಮೂಲಕ ಬಾಲ್ಯದಲ್ಲಿಯೇ ಗುರು-ಹಿರಿಯರಿಗೆ ಪೋಷಕರಿಗೆ ಹಾಗೂ ಪ್ರತಿಯೊಬ್ಬರಿಗೂ ಗೌರವ ಕೊಡುವ ಮೂಲಕ ಮೌಲ್ಯಾಧಾರಿತ ಸಮಾಜ ನಿರ್ಮಾಣ ಸಾದ್ಯವಾಗುವುದೆಂದು ಹೇಳಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ

ಸರ್ಕಾರಿ ಶಾಲೆಯ ಸಮಗ್ರ ಅಭಿವೃದ್ದಿಗೆ ಆಗತ್ಯವಿರುವ ಎಲ್ಲ ಅನುದಾನಗಳನ್ನು ತರಲು ಸದಾ ಸಿದ್ದನಾಗಿದ್ದು ಶಾಲೆಗಳಿಗೆ ಬೇಕಾದ ಮೂಲಭೂತ ಸೌಕರ್ಯಗಳ ಬಗ್ಗೆ ಮಾಹಿತಿ ನೀಡಿದರೆ ತಕ್ಷಣವೇ ಪರಿಹಾರ ಕಲ್ಪಿಸುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷ ಮಂಜಪ್ಪ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತ್ ಆಧ್ಯಕ್ಷೆ ಧನಲಕ್ಷ್ಮಿ, ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ಸದಸ್ಯರಾದ ಡಿ.ಈ.ಮಧುಸೂಧನ್, ನಿರೂಪ್ ಕುಮಾರ್, ಆಸೀಫ್‌ಭಾಷಾ, ಮಹಾಲಕ್ಷ್ಮಿ, ದಾನಮ್ಮ, ಅಶ್ವಿನಿ, ಜಿ.ಡಿ.ಮಲ್ಲಿಕಾರ್ಜುನ, ಗ್ಯಾರಂಟಿ ಸಮಿತಿ ಸದಸ್ಯ ರವೀಂದ್ರ ಕೆರೆಹಳ್ಳಿ, ಶಿಕ್ಷಣ ಇಲಾಖೆಯ ಸೋಮಶೇಖರ್ ಬಂಡಿ, ಜಗದೀಶ ಕಾಗಿನಲ್ಲಿ, ಕರಿಬಸಪ್ಪ, ನಾಗರಾಜ್, ಇನ್ನಿತರರು ಭಾಗವಹಿಸಿ ಮಾತನಾಡಿದರು.

ಮುಖ್ಯ ಶಿಕ್ಷಕ ಆಶೋಕ್ ಸ್ವಾಗತಿಸಿದರು. ಶಿಕ್ಷಕ ಸುಧಾಕರ ನಿರೂಪಿಸಿದರು. ಸುಲೇಖ ಕೆ. ವಂದಿಸಿದರು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>