Chikmagaluru News

ಸರ್ಕಾರದಿಂದ ಶಾಲಾ ಮಕ್ಕಳಿಗೆ ‘ಕೋವಿಡ್’ ಮಾರ್ಗಸೂಚಿ :ಜ್ವರ, ಕೆಮ್ಮು, ನೆಗಡಿ ಇದ್ರೆ ಮಕ್ಕಳನ್ನು ಶಾಲೆಗೆ ಕಳುಹಿಸಬೇಡಿ!

ರಾಜ್ಯಾದ್ಯಂತ 29.05.2025 ರಂದು ಪುನರಾರಂಭವಾಗುವ ಶೈಕ್ಷಣಿಕ ವರ್ಷದ ಹಿನ್ನೆಲೆ, ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳು ಆರಂಭವಾಗುತ್ತವೆ. ಆದರೆ, ಪ್ರಸ್ತುತ ರಾಜ್ಯದಲ್ಲಿ ಕೋವಿಡ್-19 ಪರಿಸ್ಥಿತಿಯ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಕೆಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಶಾಲೆಗಳಲ್ಲಿ ಈ ಕ್ರಮಗಳನ್ನು ಅನುಸರಿಸಲು ಸಂಬಂಧಿಸಿದಂತೆ ಉಲ್ಲೇಖಿತ ಪತ್ರದಲ್ಲಿ ಸೂಚನೆಗಳನ್ನು ನೀಡಲಾಗಿದೆ. ಆಗುವ ಮುಂದಿನ ಶಿಕ್ಷಣ ಕಾರ್ಯಗಳಲ್ಲಿ, ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿ ಈ ಕೆಳಗಿನ ಸೂಚನೆಗಳನ್ನು ಪಾಲಿಸಲು ತಿಳಿಸಲಾಗುತ್ತಿದೆ.

WhatsApp Group Join Now
Telegram Group Join Now
Instagram Group Join Now

1) ಶಾಲಾ ಮಕ್ಕಳಲ್ಲಿ ಜ್ವರ, ಕೆಮ್ಮು, ನೆಗಡಿ ಹಾಗೂ ಇತರ ಲಕ್ಷಣಗಳು ಕಂಡುಬಂದಾಗ, ಮಕ್ಕಳನ್ನು ಶಾಲೆಗೆ ಕಳುಹಿಸದೇ, ವೈದ್ಯರ ಸಲಹೆಯಂತೆ ಸೂಕ್ತ ಚಿಕಿತ್ಸೆ ಮತ್ತು ಆರೈಕಾ ಕ್ರಮಗಳನ್ನು ಅನುಸರಿಸಬೇಕು.

2) ಈ ಲಕ್ಷಣಗಳು ಸಂಪೂರ್ಣವಾಗಿ ಗುಣಮುಖವಾದ ನಂತರ ಮಾತ್ರ ಮಕ್ಕಳನ್ನು ಶಾಲೆಗೆ ಕಳುಹಿಸಬೇಕು.

3) ಜ್ವರ, ಕೆಮ್ಮು, ನೆಗಡಿ ಮತ್ತು ಇತರ ಲಕ್ಷಣಗಳಿರುವ ಮಕ್ಕಳು ಶಾಲೆಗೆ ಬಂದಾಗ, ಪೋಷಕರಿಗೆ ಮಾಹಿತಿ ನೀಡಬೇಕು ಮತ್ತು ಅಂತಹ ಮಕ್ಕಳನ್ನು ಸುರಕ್ಷಿತವಾಗಿ ಪೋಷಕರೊಂದಿಗೆ ಮನೆಗೆ ಕಳುಹಿಸಬೇಕು.

4) ಶಾಲಾ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಯಲ್ಲಿ ಜ್ವರ, ಕೆಮ್ಮು, ನೆಗಡಿ ಮತ್ತು ಇತರ ಲಕ್ಷಣಗಳು ಕಂಡುಬಂದಾಗ, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

5) ಶಾಲಾ ಅವಧಿಯಲ್ಲಿ ಮುಂಜಾಗ್ರತಾ ಕ್ರಮಗಳಾದ ಸಾಮಾನ್ಯ ಸ್ವಚ್ಛತೆಯ ಜೊತೆಗೆ, ಕೈಗಳ ಸ್ವಚ್ಚತೆ ಮತ್ತು ಕೆಮ್ಮುವಾಗ ಅಥವಾ ಸೀನುವಾಗ ಎಚ್ಚರಿಕೆ ವಹಿಸುವುದು ಅತ್ಯಂತ ಮಹತ್ವದ್ದು.

Read More

ಸರ್ಕಾರಿ ನೌಕರರೇ ಇದನ್ನ ಗಮನಿಸಿ: ಆರೋಗ್ಯ ಸಂಜೀವಿನಿ ಯೋಜನೆಗೆ ಈ ದಾಖಲೆಗಳು ಕಡ್ಡಾಯ!

ಸುಲಭವಾಗಿ ಇ-ಸ್ವತ್ತು ದಾಖಲೆಯನ್ನು ನಿಮ್ಮ ಮೊಬೈಲ್ನಲ್ಲೇ ಉಚಿತವಾಗಿ ಪಡೆಯಬಹುದು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650