ಹೊಸನಗರ

ಹೊಸನಗರದಲ್ಲಿ ಅದ್ಧೂರಿಯಾಗಿ ಸಂಪನ್ನಗೊಂಡ ಗಣಪತಿ ವಿಸರ್ಜನಾ ಶೋಭಾಯಾತ್ರೆ

ಹೊಸನಗರದಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗಣಪತಿ ಮೂರ್ತಿಯ ವಿಸರ್ಜನಾ ಶೋಭಾಯಾತ್ರೆ ಅದ್ಧೂರಿ ಹಾಗೂ ಭಕ್ತಿಭಾವದ ವಾತಾವರಣದಲ್ಲಿ ನೆರವೇರಿತು.

ಹೊಸನಗರದಲ್ಲಿ ಅದ್ಧೂರಿಯಾಗಿ ಸಂಪನ್ನಗೊಂಡ ಗಣಪತಿ ವಿಸರ್ಜನಾ ಶೋಭಾಯಾತ್ರೆ HMS

ಹೊಸನಗರ: ಪಟ್ಟಣದಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗಣಪತಿ ಮೂರ್ತಿಯ ವಿಸರ್ಜನಾ ಶೋಭಾಯಾತ್ರೆ ಅದ್ಧೂರಿ ಹಾಗೂ ಭಕ್ತಿ-ಭಾವದ ವಾತಾವರಣದಲ್ಲಿ ನೆರವೇರಿತು.

WhatsApp Group Join Now
Telegram Group Join Now
Instagram Group Join Now

ಪಟ್ಟಣದ ಅಂಚೆ ಕಚೇರಿ ಸಮೀಪದ ವೀರ ಸಾವರ್ಕರ್ ಮಂಟಪದಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾ ಹೊಸನಗರ ಘಟಕದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ 8ನೇ ವರ್ಷದ ಗಣಪತಿ ಮೂರ್ತಿಗೆ ಸೋಮವಾರ ಸಂಜೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಶೋಭಾಯಾತ್ರೆಗೆ ಚಾಲನೆ ನೀಡಲಾಯಿತು.

ಮೆರವಣಿಗೆಯು ದ್ಯಾವರ್ಸ, ನೆಹರು ರಸ್ತೆ, ಕೋರ್ಟ್ ಸರ್ಕಲ್, ಚೌಡಮ್ಮ ರಸ್ತೆ, ಕಾಳಿಕಾಪುರ ರಸ್ತೆ ಸೇರಿದಂತೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಾಗಿತು. ಡೊಳ್ಳು ಕುಣಿತ, ಚಂಡೆ ವಾದನ, ವಿವಿಧ ಬಗೆಯ ಗೊಂಬೆಗಳ ಪ್ರದರ್ಶನ ಹಾಗೂ ಆಕರ್ಷಕ ಸ್ತಬ್ಧಚಿತ್ರಗಳು ಶೋಭಾಯಾತ್ರೆಯ ಪ್ರಮುಖ ಆಕರ್ಷಣೆಯಾಗಿದ್ದವು.

ಗಣಪತಿ ಮೆರವಣಿಗೆಯ ಹಿನ್ನೆಲೆಯಲ್ಲಿ ಪಟ್ಟಣದ ಪ್ರಮುಖ ಭಾಗಗಳಲ್ಲಿ ಕೇಸರಿ ಧ್ವಜಗಳು ರಾರಾಜಿಸಿದವು. ಯುವಕರು ಹಾಗೂ ಮಹಿಳೆಯರು ಡಿಜೆ ಮತ್ತು ಮಂಗಳವಾದ್ಯಗಳೊಂದಿಗೆ ಉತ್ಸಾಹದಿಂದ ಹೆಜ್ಜೆ ಹಾಕಿ ಸಂಭ್ರಮಿಸಿದರು. ಭಕ್ತರ ಘೋಷಣೆಗಳು ಹಾಗೂ ವಿವಿಧ ಸಾಂಸ್ಕೃತಿಕ ಪ್ರದರ್ಶನಗಳಿಂದ ಶೋಭಾಯಾತ್ರೆಗೆ ಮತ್ತಷ್ಟು ಕಳೆ ಬಂದಿತ್ತು.

ಸುಮಾರು 14 ಗಂಟೆಗಳ ಕಾಲ ನಿರಂತರವಾಗಿ ಸಾಗಿದ ಮೆರವಣಿಗೆ ರಾತ್ರಿಯಿಡೀ ಮುಂದುವರಿದು ಮಂಗಳವಾರ ಮುಂಜಾನೆ ಗಣಪತಿ ದೇವಸ್ಥಾನದ ಪುಷ್ಕರಣಿಯನ್ನು ತಲುಪಿತು. ಬಳಿಕ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿ, ಭಕ್ತರ ಜಯಘೋಷಗಳ ನಡುವೆ ಮಹಾಗಣಪತಿ ಮೂರ್ತಿಯನ್ನು ಪುಷ್ಕರಣಿಯಲ್ಲಿ ಶಾಸ್ತ್ರೋಕ್ತವಾಗಿ ವಿಸರ್ಜಿಸಲಾಯಿತು.

ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಭಾಗವಹಿಸಿದ್ದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ಹಾಗೂ ಬಿಗಿ ಭದ್ರತಾ ವ್ಯವಸ್ಥೆ ಕಲ್ಪಿಸಿತ್ತು. ಒಟ್ಟಾರೆ ಗಣಪತಿ ವಿಸರ್ಜನಾ ಶೋಭಾಯಾತ್ರೆ ಶಾಂತಿಯುತವಾಗಿ ಹಾಗೂ ಭಕ್ತಿಪೂರ್ವಕವಾಗಿ ಸಂಪನ್ನಗೊಂಡಿತು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!