Crime News

ಮೊಮ್ಮಗನಿಂದ ಅಜ್ಜಿಯ ಭೀಕರ ಕೊಲೆ ; ನಡುರಸ್ತೆಯಲ್ಲೇ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ !

ಶಿವಮೊಗ್ಗ : ನಗರದ ಮಿಳಘಟ್ಟ ಸಮೀಪದ ಆನಂದರಾವ್ ಬಡಾವಣೆಯಲ್ಲಿ ಭೀಕರ ಹತ್ಯೆಯೊಂದು ನಡೆದಿದೆ. 65 ವರ್ಷದ ಸುಶೀಲಮ್ಮ ಎಂಬ ಅಜ್ಜಿ ತಮ್ಮ 28 ವರ್ಷದ ಮೊಮ್ಮಗ ಕಿಶೋರ್ ಅವರಿಂದ ಕೊಲೆಯಾಗಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಆರೋಪಿ ಕಿಶೋರ್ ಗಾಂಜಾ ವ್ಯಸನಿಯಾಗಿದ್ದು, ಅಜ್ಜಿ ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಲು ಹೊರಟಾಗ ಕಿಶೋರನ ಆಕ್ರೋಶ ಹೆಚ್ಚಾಗಿದೆ. ಇದರಿಂದಲೇ ಕಿಶೋರ್ ಸಾರ್ವಜನಿಕ ರಸ್ತೆಯಲ್ಲಿಯೇ ಹಿಂದಿನಿಂದ ಬಂದು ತನ್ನ ಅಜ್ಜಿಯ ತಲೆ ಮೇಲೆ ಸೈಜ್ ಕಲ್ಲು ಎತ್ತಿ ಹಾಕಿದ್ದಾನೆ. ತೀವ್ರ ರಕ್ತಸ್ರಾವದಿಂದ ಸುಶೀಲಮ್ಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ದೊಡ್ಡಪೇಟೆ ಠಾಣೆಯ ಪೊಲೀಸರು ಮತ್ತು ಎಸ್ಪಿ ನಿಖಿಲ್ ಬಿ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>