ಗೃಹ ಆರೋಗ್ಯ ಯೋಜನೆ : ಮನೆ ಬಾಗಿಲಲ್ಲಿಯೇ ವಿವಿಧ ಅನಾರೋಗ್ಯ ಸಮಸ್ಯೆಗಳಿಗೆ ಸಿಗಲಿವೆ ಈ ಎಲ್ಲಾ ಸೇವೆಗಳು!ಬೆಂಗಳೂರಿನ ವಿಕಾಸ ಸೌಧದಲ್ಲಿ ಗೃಹ ಆರೋಗ್ಯ ಯೋಜನೆಯ ಅನುಷ್ಣಕ್ಕೆ ಸಂಬಂಧಿಸಿದ ಕಾರ್ಯಾಗಾರವನ್ನು ಉದ್ಘಾಟಿಸುವಾಗ ಸಚಿವರು ಮಾತನಾಡಿದರು. ಅಸಾಂಕ್ರಾಮಿಕ ರೋಗಗಳು ಜನರ ಜೀವಕ್ಕೆ ಅಪಾಯವನ್ನು ಉಂಟುಮಾಡುತ್ತವೆ. ಖಾಸಗಿ ಆರೋಗ್ಯ ಕ್ಷೇತ್ರದಲ್ಲಿ ಚಿಕಿತ್ಸೆ ನೀಡಲು ಹೆಚ್ಚು ಆದ್ಯತೆ ನೀಡಲಾಗುತ್ತದೆ. ಆದರೆ ಅಸಾಂಕ್ರಾಮಿಕ ರೋಗಗಳನ್ನು ಮುಂಚಿತವಾಗಿ ತಡೆಗಟ್ಟುವುದೇ ಮುಖ್ಯವಾಗಿದೆ. ಈ ಕಾರ್ಯವನ್ನು ಸರ್ಕಾರವೇ ಕೈಗೊಂಡು ನಿರ್ವಹಿಸಬೇಕು, ಇತರರನ್ನು ಇದರಲ್ಲಿ ಆಸಕ್ತಿ ತೋರಿಸುವುದಿಲ್ಲ. ಆದ್ದರಿಂದ, ಜವಾಬ್ದಾರಿಯುತ ಸರ್ಕಾರವನ್ನು ರೂಪಿಸುತ್ತಾ, ಆರೋಗ್ಯ ಇಲಾಖೆಯು ರಾಜ್ಯಾದ್ಯಂತ ಅಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಗೃಹ ಆರೋಗ್ಯ ಯೋಜನೆಯು ವಿಸ್ತಾರಗೊಳ್ಳುತ್ತಿದೆ. 30 ವರ್ಷ ಮೇಲ್ಪಟ್ಟ ಎಲ್ಲಾ ಮನೆಗಳಲ್ಲಿ ವ್ಯಕ್ತಿಗಳನ್ನು ತಪಾಸಣೆಗೆ ಒಳಪಡಿಸಿ, ಅವರ ಬಳಿಗೆ ಸೂಕ್ತ ಔಷಧಿಗಳನ್ನು ತಲುಪಿಸುವ ಕಾರ್ಯವನ್ನು ಪ್ರಾರಂಭಿಸಲಾಗುತ್ತಿದೆ ಎಂದು ಅವರು ಹೇಳಿದರು.
ಮನೆ ಬಾಗಿಲಿಗೆ ವಿವಿಧ ಆರೋಗ್ಯ ಸಮಸ್ಯೆಗಳನ್ನು ಪತ್ತೆ ಹಚ್ಚಲು, ಗೃಹ ಆರೋಗ್ಯ ಯೋಜನೆಯು 2024ರ ಅಕ್ಟೋಬರ್‌ನಲ್ಲಿ ಕೋಲಾರದಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾದಾಗಿನಿಂದ ಈಗ ಈ ಯೋಜನೆ ರಾಜ್ಯದಾದ್ಯಂತ ವಿಸ್ತಾರಗೊಂಡಿದೆ. ಈ ಯೋಜನೆಯ ಅಡಿಯಲ್ಲಿ ಗ್ರಾಮೀಣ ಪ್ರದೇಶದಲ್ಲಿ 30 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನ ವ್ಯಕ್ತಿಗಳಿಗೆ 14 ಅಸಾಂಕ್ರಮಿಕ ರೋಗಗಳ ತಪಾಸಣೆ ಮತ್ತು ನಿರ್ವಹಣೆ ಮಾಡಲಾಗುತ್ತದೆ.
ಪ್ರಾಥಮಿಕ ತಪಾಸಣೆ ಮತ್ತು ಉಚಿತ ಔಷಧ ವಿತರಣೆಯ ಮೂಲಕ, ಅಸಾಂಕ್ರಮಿಕ ರೋಗಗಳ ಪರಿಣಾಮಗಳು ಮತ್ತು ಅಕಾಲಿಕ ಮರಣವನ್ನು ತಡೆಯಲು ಈ ಯೋಜನೆ ಪ್ರಮುಖ ಪಾತ್ರ ವಹಿಸಲಿದೆ. ಗೃಹ ಆರೋಗ್ಯ ಯೋಜನೆಯ ಪ್ರಮುಖ ಉದ್ದೇಶವೆಂದರೆ, ಅಸಾಂಕ್ರಮಿಕ ರೋಗಗಳನ್ನು ಆರಂಭಿಕ ಹಂತದಲ್ಲಿ ಪತ್ತೆ ಹಚ್ಚುವುದು, ಸಾರ್ವಜನಿಕರಲ್ಲಿ ಆರೋಗ್ಯ ತಪಾಸಣೆ ಮತ್ತು ನಿರ್ವಹಣೆಯ ಕುರಿತು ಜಾಗೃತಿ ಮೂಡಿಸುವುದು, ಮತ್ತು ವಿಕೇಂದ್ರೀಕೃತ ಆರೋಗ್ಯ ಸೇವೆಗಳ ಮೂಲಕ ನಿರಂತರ ಆರೈಕೆಯನ್ನು ಖಚಿತಪಡಿಸುವುದು.
MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.