Chikmagaluru News

ಶೀಘ್ರದಲ್ಲೇ ಏಪ್ರಿಲ್ ಮತ್ತು ಮೇ ತಿಂಗಳ ‘ಗೃಹಲಕ್ಷ್ಮಿ’ ಯೋಜನೆಯ ಹಣ ಖಾತೆಗೆ ಜಮಾ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Gruha lakshmi:ಮನೆಯ ಯಜಮಾನಿಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಒಂದು ಸಿಹಿ ಸುದ್ದಿ ನೀಡಿದ್ದಾರೆ, ಏಪ್ರಿಲ್ ಹಾಗೂ ಮೇ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಶೀಘ್ರದಲ್ಲೇ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಳೆದ ಎರಡು ತಿಂಗಳಿಂದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗಳಿಗೆ ಹಣ ಜಮಾ ಮಾಡಲಾಗಿಲ್ಲ ಮತ್ತು ಇದಕ್ಕೆ ಮಾರ್ಚ್ ತಿಂಗಳ ಅಂತ್ಯದ ಕಾರಣವಾಗಿದೆ. ಆದಾಗ್ಯೂ, ಮಾರ್ಚ್ ತಿಂಗಳ ಹಣದ ಬಿಡುಗಡೆ ಹೆಚ್ಚು ಕಡಿಮೆ ಆಗಿರುವುದನ್ನು ಅವರು ತಿಳಿಸಿದ್ದಾರೆ. ಹೀಗಾಗಿ, ಶೀಘ್ರವೇ ಫಲಾನುಭವಿಗಳ ಖಾತೆಗಳಿಗೆ ಹಣ ಜಮಾ ಮಾಡಲಾಗುವುದು ಎಂದು ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

WhatsApp Group Join Now
Telegram Group Join Now
Instagram Group Join Now

ನೀವು ಗೃಹ ಲಕ್ಷ್ಮೀ ಯೋಜನೆಯ ಹಣವನ್ನು ಬಂದಿದ್ದೀನಾ ಎಂಬುದನ್ನು ಚೆಕ್ ಮಾಡುವ ವಿಧಾನ ಈ ವಿಭಾಗದಲ್ಲಿ ನೀಡಲಾಗಿದೆ

ಹಂತ 1: ನಿಮ್ಮ ಮೊಬೈಲ್‌ನಲ್ಲಿ ಗೂಗಲ್ ಪ್ಲೇ ಸ್ಟೋರ್‌ಗೆ ಹೋಗಿ, “DBT Karnataka” ಎಂಬ ಆಪ್ಲಿಕೇಶನ್ ಅನ್ನು ಹುಡುಕಿ ಮತ್ತು ಡೌನ್‌ಲೋಡ್ ಮಾಡಿ.

ಹಂತ 2: ಫಲಾನುಭವಿಯ ಆದಾರ್ ಸಂಖ್ಯೆಯನ್ನು ನಮೂದಿಸಿ ಮತ್ತು “Get OTP” ಮೇಲೆ ಕ್ಲಿಕ್ ಮಾಡಿ.

ಹಂತ 3: ನಿಮ್ಮ ಆದಾರ್ ಸಂಖ್ಯೆಯನ್ನು ಒಳಗೊಂಡು, OTP ಪಡೆಯಲು “Get OTP” ಕ್ಲಿಕ್ ಮಾಡಿ, ನಂತರ ನಿಮಗೆ ಬಂದ OTP ಅನ್ನು ನಮೂದಿಸಿ ಮತ್ತು “Verify OTP” ಕ್ಲಿಕ್ ಮಾಡಿ.

ಹಂತ 4: ನಂತರ, ನೀವು 4 ಸಂಖ್ಯೆಗಳ mPIN ಅನ್ನು ಆಯ್ಕೆ ಮಾಡಬೇಕಾಗುತ್ತದೆ. ಆದಿಟ್ಟು “Confirm mPIN” ಅನ್ನು ನಮೂದಿಸಿ ಮತ್ತು “Submit” ಕ್ಲಿಕ್ ಮಾಡಿ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಹಂತ 5: ಈಗ ಮನೆ ಪುಟದಲ್ಲಿ “Payment Status” ಮೇಲೆ ಕ್ಲಿಕ್ ಮಾಡಿ. ಇಲ್ಲಿ ನೀವು ಗೃಹ ಲಕ್ಷ್ಮೀ ಯೋಜನೆಯ ಹಣ ವರ್ಗಾವಣೆಯ ಸ್ಥಿತಿಯನ್ನು ತಿಳಿದುಕೊಳ್ಳಬಹುದು. ಜೊತೆಗೆ, “Seeding status of Aadhaar in bank account” ಮೇಲೆ ಕ್ಲಿಕ್ ಮಾಡುವ ಮೂಲಕ ನಿಮ್ಮ ಆದಾರ್ ಸೀಡಿಂಗ್ ಸ್ಥಿತಿಯನ್ನು ಮತ್ತು ಅದು ಯಾವ ಬ್ಯಾಂಕ್‌ ಗೆ ಸೀಡಾಗಿದೆ ಎಂಬುದನ್ನು ತಿಳಿದುಕೊಳ್ಳಬಹುದು.

ಹಂತ 6: ಇಲ್ಲಿ ನೀವು ಸರ್ಕಾರದಿಂದ ಜಮಾ ಮಾಡಿರುವ ಗೃಹ ಲಕ್ಷ್ಮೀ ಯೋಜನೆಯ ಹಣದ ವರ್ಗಾವಣೆ ವಿಷಯವನ್ನು ತಿಳಿದುಕೊಳ್ಳಬಹುದು.

Read More

ಸರ್ಕಾರಿ ನೌಕರರೇ ಇದನ್ನ ಗಮನಿಸಿ: ಆರೋಗ್ಯ ಸಂಜೀವಿನಿ ಯೋಜನೆಗೆ ಈ ದಾಖಲೆಗಳು ಕಡ್ಡಾಯ!

ಗ್ರಾಮೀಣ ಪ್ರದೇಶದ ಲಕ್ಷಾಂತರ ಅನಧಿಕೃತ ಆಸ್ತಿದಾರರಿಗೆ ಗುಡ್ ನ್ಯೂಸ್!

ಹೊಸ ಹಣಕಾಸು ನೀತಿಯಿಂದ ನಿವೃತ್ತ ಸರ್ಕಾರಿ ನೌಕರರಿಗೆ ಜೇಬಿಗೆ ಕತ್ತರಿ!

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650