ಹೊಸನಗರ ; ಅನಾರೋಗ್ಯದ ಹಿನ್ನಲೆಯಲ್ಲಿ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಈಡಿಗ ಜನಾಂಗದ ಕತ್ರಿಕೊಪ್ಪದ ಕೃಷಿಕ ಗುಂಡಪ್ಪ (80) ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ರಾತ್ರಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಹೊಸನಗರ ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಗಾಯಿತ್ರಿ ರಾಮಚಂದ್ರಪ್ಪ ಮತ್ತು ಹೊಸನಗರ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಜಿ. ಪುಟ್ಟಸ್ವಾಮಿ, ಕೆ.ಜಿ. ಪ್ರಮೀಳಾ, ಕೆ.ಜಿ. ಶಿವಕುಮಾರ್, ಅಳಿಯ ವಕೀಲ ಕೆ.ವೈ.ರಾಮಚಂದ್ರ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

ಸಂತಾಪ ;
ಮೃತರ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು, ಮಾಜಿ ಸಚಿವ ಹರತಾಳು ಹಾಲಪ್ಪ, ಮಾಜಿ ಶಾಸಕ ಬಿ.ಸ್ವಾಮಿರಾವ್, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಮಾಜಿ ಸದಸ್ಯ ಸುರೇಶ್ ಸ್ವಾಮಿರಾವ್, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ಜಿ.ನಾಗರಾಜ್, ತಾಲೂಕು ಪಂಚಾಯತಿ ಮಾಜಿ ಸದಸ್ಯ ಎರಗಿ ಉಮೇಶ್ ಸೇರಿದಂತೆ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





