ಸದೃಢ ಸಮಾಜ ಕಟ್ಟಲು ಗುರುಭಕ್ತಿ ಮತ್ತು ಗುರುಶಕ್ತಿ ಒಂದಕ್ಕೊಂದು ಪೂರಕ ; ಹೆಚ್.ಆರ್ ಕೃಷ್ಣಮೂರ್ತಿ

Written by Mahesha Hindlemane

Published on:

ಶಿವಮೊಗ್ಗ ; ಇಲ್ಲಿನ ಡಯಟ್ ನಲ್ಲಿ ನೋವೆಲ್ ಹೋಪ್ ಫೌಂಡೇಶನ್ ಬೆಂಗಳೂರು ಮತ್ತು ನಲಿ-ಕಲಿ ಕ್ರಿಯಾಶೀಲ ತಾರೆಯರ ಫೌಂಡೇಶನ್‌ನ ಸಹಭಾಗಿತ್ವದಲ್ಲಿ ನಡೆದ ವಿವಿಧ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಿಸಲಾಯಿತು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಡಯಟ್ ನ ಪ್ರಾಂಶುಪಾಲ ಹೆಚ್.ಆರ್ ಕೃಷ್ಣಮೂರ್ತಿ, ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಆರ್ಥಿಕ ಸೌಲಭ್ಯಗಳ ಬಲವರ್ಧನೆಗಾಗಿ ನೋವೆಲ್ ಹೋಪ್ ಫೌಂಡೇಶನ್ ಬೆಂಗಳೂರು ಮತ್ತು ನಲಿಕಲಿ ಕ್ರಿಯಾಶೀಲ ತಾರೆಯರ ಫೌಂಡೇಶನ್ ಶಿವಮೊಗ್ಗ ಇವರ ಕಾರ್ಯ ಅತ್ಯುತ್ತಮವಾದದ್ದು ಮತ್ತು ಶ್ಲಾಘನೀಯವಾದದ್ದು ಗುರು ಭಕ್ತಿ ಮತ್ತು ಗುರು ಶಕ್ತಿ ಒಂದಕ್ಕೊಂದು ಪೂರಕವಾಗಿದ್ದರೆ ಸದೃಢ ಸಮಾಜವನ್ನು ಕಟ್ಟಬಹುದು ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾದ ರೇಣುಕಾ, ಹಿರಿಯ ಉಪನ್ಯಾಸಕರು ಡಯಟ್ ಶಿವಮೊಗ್ಗ ನಲಿ-ಕಲಿ ಕ್ರಿಯಾಶೀಲ ತಾರೆಯರ ತಂಡ ಸುಮಾರು 450ಕ್ಕೂ ಹೆಚ್ಚಿನ ವ್ಯಾಬಿನ್ನಾರ್ ಮೂಲಕ ರಾಜ್ಯದ ತುಂಬಾ ಗುಣಮಟ್ಟದ ಕಲಿಕೆಗೆ ತಮ್ಮದೇ ಆದ ಪಾತ್ರವನ್ನು ವಹಿಸುತ್ತಿದೆ ಎಂದು ತಿಳಿಸಿದರು.

ನೋವೆಲ್ ಹೋಪ್ ಫೌಂಡೇಶನ್‌ನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ದೀಪಕ್ ಮಾತನಾಡಿ, ಸರ್ಕಾರಿ ಶಾಲೆಗಳ ಬಲವರ್ಧನೆ ಮತ್ತು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಈಗಾಗಲೇ ಕರ್ನಾಟಕ ರಾಜ್ಯದಲ್ಲಿ ಅನೇಕ ಜಿಲ್ಲೆಗಳಲ್ಲಿ ಬ್ಯಾಗ್ ವಿತರಣಾ ಕಾರ್ಯಕ್ರಮ ಮಾಡಲಾಗುತ್ತಿದೆ ಎಂದು ತಿಳಿಸಿ, 200 ಶಾಲೆಗಳಿಗೆ ಬ್ಯಾಗ್ ವಿತರಣೆ ಜಿಲ್ಲೆಯ 200ಕ್ಕೂ ಹೆಚ್ಚು ಶಾಲೆಗಳಿಗೆ 16 ಲಕ್ಷ ರೂ. ಮೌಲ್ಯದ 4000 ಶಾಲಾ ಬ್ಯಾಗ್‌ಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ಈ ಬಾರಿ ವಿವಿಧ ಜಿಲ್ಲೆಗಳಲ್ಲಿ 30000 ಶಾಲಾ ಬ್ಯಾಗ್‌ಗಳನ್ನು ಹಂಚುವ ಯೋಜನೆ ಜತೆಗೆ ವಿದ್ಯಾರ್ಥಿಗಳಿಗೆ ಸಮವಸ್ತ್ರ ಶೂ ಸಾಕ್ಸ್ ಕೂಡ ನೀಡಲಾಗುವುದು. ಕೆಲವು ಸರ್ಕಾರಿ ಶಾಲೆಗಳನ್ನು ಗುರುತಿಸಿ ಶೌಚಾಲಯ ವ್ಯವಸ್ಥೆ ಕಲ್ಪಿಸಲು ಚಿಂತನೆ ನಡೆದಿದೆ. ಪ್ರಸ್ತುತ ಒಳ್ಳೆಯ ಕಾರ್ಯ ಮಾಡುವುದಕ್ಕೆ ಅನೇಕ ಸವಾಲುಗಳಿವೆ. ಆದರೆ ನಲಿ-ಕಲಿ ತಾರೆಯರ ತಂಡ ಇಲ್ಲಿ ಉತ್ತಮ ಸೇವಾ ಮನೋಭಾವ ಹೊಂದಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕ್ರಿಯಾಶೀಲ ತಾರೆಯರ ತಂಡದ ಅಧ್ಯಕ್ಷೆ ಫೌಜಿಯಾ ಶರಾವತ್ ಮಾತನಾಡಿ, ನಮ್ಮ ಫೌಂಡೇಶನ್ ವತಿಯಿಂದ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ ಈ ಕಾರ್ಯಕ್ರಮಕ್ಕೆ ಸಹಕರಿಸುತ್ತಿರುವ ಸರ್ವರಿಗೂ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸಿದರು ಮತ್ತು ವಿದ್ಯಾರ್ಥಿಗಳು ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ತಿಳಿಸಿದರು.

ಭದ್ರಾವತಿ ಬಿಇಒ ನಾಗೇಂದ್ರಪ್ಪ ಮಾತನಾಡಿ, ನಲಿಕಲಿ ಕ್ರಿಯಾಶೀಲ ತಾರೆಯರ ತಂಡ ಉತ್ತಮ ಕಾರ್ಯ ಮಾಡುತ್ತಿದೆ. ಇದರಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ಬದಲಾವಣೆ ತರಲು ಸಾಧ್ಯ. ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಶಿಕ್ಷಕರ ಪಾತ್ರ ಹಿರಿದು. ಇಲ್ಲಿ ಮಕ್ಕಳ ಕಲಿಕೆಯ ಸ್ಥಿತಿಗತಿಯನ್ನು ಅವಲೋಕಿಸುವುದು ಅತ್ಯಂತ ಮುಖ್ಯ ಎಂದು ಹೇಳಿದರು.

ಈ ಕಾರ್ಯಕ್ರಮದ ಜೊತೆಗೆ
ವಿದ್ಯಾರ್ಥಿಗಳಿಗೆ ಅಕ್ಷರಭ್ಯಾಸ, ಕಂಠಪಾಠ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಭದ್ರಾವತಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ನಲಿ-ಕಲಿ ಕ್ರಿಯಾಶೀಲ ಫೌಂಡೇಶನ್‌ನ ಗೌರವಾಧ್ಯಕ್ಷರು, ಕಾರ್ಯದರ್ಶಿಗಳು ಮತ್ತು ಸದಸ್ಯರು, ವಿಜಯಕುಮಾರ್ ಶಿಕ್ಷಕರು ಕಲ್ಬುರ್ಗಿ, ಸುನಂದ ಎಸ್ ಕಲ್ಬುರ್ಗಿ, ರಾಜ್ಯ ನಲಿ-ಕಲಿ ಸಂಪನ್ಮೂಲ ವ್ಯಕ್ತಿಗಳು, ವಿವಿಧ ಶಾಲೆಗಳ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ವಿವಿಧ ಸಂಘದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Leave a Comment