Hosanagara

ಹೊಸನಗರದ ವಿವಿಧೆಡೆ ಸಂಭ್ರಮದ ಹನುಮ ಜಯಂತಿ

ಹೊಸನಗರ ; ಪಟ್ಟಣದ ನಗರ ರಸ್ತೆಯಲ್ಲಿರುವ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದ 18ನೇ ವರ್ಷದ ಹನುಮ ಜಯಂತಿ ಹಾಗೂ ಶ್ರೀ ದೇವರ ರಥೋತ್ಸವ ಸಡಗರ ಸಂಭ್ರಮದಿಂದ ವರ್ಣರಂಜಿತವಾಗಿ ನೆರವೇರಿತು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಗುರುವಾರ ಬೆಳಿಗ್ಗೆ ಗೋಪೂಜೆ, ಗಣಪತಿ ಹೋಮ, ರಾಮ ತಾರಕ ಹೋಮ, ಶ್ರೀದೇವರ ತೊಟ್ಟಿಲು ಸೇವೆ, ಸಾಮೂಹಿಕ ರುದ್ರಾಭಿಷೇಕ, ಪವಮಾನ ಅಭಿಷೇಕ, ಶ್ರೀ ನಾಗದೇವರ ಸನ್ನಿಧಿಯಲ್ಲಿ ತತ್ವದಿವಾಸ ಹೋಮ ನಂತರ ಕಳಷಾಭಿಷೇಕ ಮಹಾಪೂಜೆ, ಮಹಾಮಂಗಳಾರತಿ, ತೀರ್ಥಪ್ರಸಾದ ನಂತರ ನೆರೆದಿದ್ದ ನೂರಾರು ಭಕ್ತವೃಂದಕ್ಕೆ ಮಹಾ ಅನ್ನಸಂತರ್ಪಣೆ ನೆರವೇರಿತು.

ಸಂಜೆ ಭಜನೆ ಕುಣಿತ ಮಂಗಳವಾದ್ಯದೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಶೋಭಾಯಾತ್ರೆ ನಡೆಯಿತು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ

ಶ್ರೀ ಆಂಜನೇಯಸ್ವಾಮಿ ವಾರ್ಷಿಕ ವರ್ಧಂತ್ಯುತ್ಸವ ಸಂಭ್ರಮ

ರಿಪ್ಪನ್‌ಪೇಟೆ : ಇತಿಹಾಸ ಪ್ರಸಿದ್ದ ಹುಂಚ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಇಂದು ಚತುರ್ಥ ವರ್ಷದ ವರ್ಧಂತ್ಯುತ್ಸವ ಅಂಗವಾಗಿ ಶ್ರೀ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಹಾಗೂ ಹೋಮ-ಹವನ ಇನ್ನಿತರ ಧಾರ್ಮಿಕ ಪೂಜಾ ಕೈಂಕರ್ಯಗಳು ಶ್ರದ್ದಾಭಕ್ತಿಯಿಂದ ಜರುಗಿತು.

ಇಂದು ಬೆಳಗ್ಗೆ 9 ಗಂಟೆಗೆ ಗುರು ಗಣಪತಿ ಪ್ರಾರ್ಥನೆ, ದೇವತಾ ಪ್ರಾರ್ಥನೆ, ಪುಣ್ಯಾಹ, ಕೃಚ್ಟ್ರಾಚರಣೆ, ಋತ್ವಿಕ್ ವರ್ನನೆ, ಕಲಾವೃದ್ದಿ ಹೋಮ, ಕಲಾತತ್ವ ಹೋಮ, ಮೂಲಮಂತ್ರಹೋಮ, ನವಕ ಪ್ರಧಾನ ಸ್ನಪನ ಕಲಶಸ್ಥಾಪನೆ, ಹೋಮದ ಪೂರ್ಣಾಹುತಿ ಹಾಗೂ ಶ್ರೀಸ್ವಾಮಿಗೆ ಸ್ನಪನ ಕಲಶಾಭಿಷೇಕ ಅಲಂಕಾರ ಪೂಜೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿತರಣೆ ನಂತರ ಸಾಮೂಹಿಕ ಅನ್ನಸಂತರ್ಪಣೆ ನೆರವೇರಿತು.


ಶ್ರೀದುರ್ಗಾಪರಮೇಶ್ವರಿ ಅಮ್ಮನವರ 27ನೇ ವರ್ಷದ ವಾರ್ಷಿಕ ವರ್ಧಂತ್ಯುತ್ಸವ

ರಿಪ್ಪನ್‌ಪೇಟೆ ; ಇಲ್ಲಿನ ವಿನಾಯಕ ನಗರದಲ್ಲಿರುವ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇಂದು ಶ್ರೀದುರ್ಗಾಪರಮೇಶ್ವರಿ ಸನ್ನಿಧಿಯಲ್ಲಿ 27ನೇ ವರ್ಷದ ವಾರ್ಷಿಕೋತ್ಸವ ಮತ್ತು ವರ್ಧಂತ್ಯುತ್ಸವ ಕಾರ್ಯಕ್ರಮವು ದೇವಸ್ಥಾನದ ಪ್ರಧಾನ ಅರ್ಚಕ ರವಿಭಟ್ ನೇತೃತ್ವದಲ್ಲಿ ಜರುಗಿತು.

ಗುರುವಾರ ಬೆಳಗ್ಗೆ ದೇವಿಯ ಸನ್ನಿಧಿಯಲ್ಲಿ ಕಲಾಹೋಮ ಕುಂಭಾಭಿಷೇಕ ಸಾಮೂಹಿಕ ಶ್ರೀಸತ್ಯನಾರಾಯಣಪೂಜೆ ಹಾಗೂ ವಿಶೇಷ ಅಲಂಕಾರ ಪೂಜೆ ಮಹಾಮಂಗಳಾರತಿ ನಂತರ ಸಾಮೂಹಿಕ ಅನ್ನಸಂತರ್ಪಣೆ ನೆರವೇರಿತು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>