ಹೊಸನಗರ

ಹೊಸನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ಮಾಜಿ ಸಚಿವ ಹರತಾಳು ಹಾಲಪ್ಪ ಆಕ್ರೋಶ, ಧರಣಿ

ದಶಕಗಳಿಂದ ಅರಣ್ಯ ಭೂಮಿಯಲ್ಲಿ ವಾಸಿಸುತ್ತಿರುವ ಜನರಿಗೆ ಯಾವುದೇ ಕಿರುಕುಳ ನೀಡಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಧಾನಸಭೆಯಲ್ಲಿ ಭರವಸೆ ನೀಡಿದ್ದಾರೆ.

ಹೊಸನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ಮಾಜಿ ಸಚಿವ ಹರತಾಳು ಹಾಲಪ್ಪ ಆಕ್ರೋಶ, ಧರಣಿ Halappa

ಹೊಸನಗರ: ದಶಕಗಳಿಂದ ಅರಣ್ಯ ಭೂಮಿಯಲ್ಲಿ ವಾಸಿಸುತ್ತಿರುವ ಜನರಿಗೆ ಯಾವುದೇ ಕಿರುಕುಳ ನೀಡಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಧಾನಸಭೆಯಲ್ಲಿ ಭರವಸೆ ನೀಡಿದ್ದಾರೆ. ಆದರೆ, ಹೊಸನಗರದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಯಾವುದೇ ಮುನ್ಸೂಚನೆ ಅಥವಾ ನೋಟಿಸ್ ನೀಡದೆ ಹರತಾಳು ಗ್ರಾಮದ ನಿವಾಸಿಗಳ ಮನೆಗೆ ನುಗ್ಗಿ ಅವರ ಕಾಂಪೌಂಡ್ ಧ್ವಂಸಗೊಳಿಸಿದ್ದಾರೆ. “ರಾಜ್ಯದಲ್ಲೊಂದು ಸರ್ಕಾರವಿದ್ದರೆ, ಹೊಸನಗರದಲ್ಲೇ ಮತ್ತೊಂದು ಸರ್ಕಾರವಿದೆಯೇ?” ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಪ್ರಶ್ನಿಸಿ, ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

WhatsApp Group Join Now
Telegram Group Join Now
Instagram Group Join Now

ತಾಲೂಕಿನ ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಚ್. ಹುಣಸವಳ್ಳಿ ಗ್ರಾಮದ ಸ.ನಂ. 43ರಲ್ಲಿ ಹಲವು ವರ್ಷಗಳಿಂದ ವಾಸಿಸುತ್ತಿದ್ದ ರವೀಂದ್ರ ಹಾಗೂ ಕಲ್ಯಾಣಮೂರ್ತಿ ಎಂಬುವರ ನಿವಾಸಕ್ಕೆ ಇಲಾಖೆಯ ಸಿಬ್ಬಂದಿ ಅಕ್ರಮವಾಗಿ ಪ್ರವೇಶಿಸಿ ತಡೆಗೋಡೆ (ಕಾಂಪೌಂಡ್) ನೆಲಸಮಗೊಳಿಸಿರುವುದನ್ನು ಖಂಡಿಸಿ, ಹೊಸನಗರ ಅರಣ್ಯ ಇಲಾಖೆ ಕಚೇರಿ ಮುಂದೆ ಹಾಲಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಅಧಿಕಾರಿಯ ನಡೆಗೆ ಖಂಡನೆ:

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಆರ್‌ಎಫ್‌ಒ ಆಸಿಫ್ ಅಹಮಾದ್, “ಅದು ಅರಣ್ಯ ಭೂಮಿಯಾಗಿದ್ದು, ನಾವು ಗಿಡಗಳನ್ನು ನೆಟ್ಟಿದ್ದೇವೆ. ಅದಕ್ಕಾಗಿಯೇ ಕಾಂಪೌಂಡ್ ತೆರವುಗೊಳಿಸಿದ್ದೇವೆ” ಎಂದು ಸಮರ್ಥಿಸಿಕೊಂಡರು. ಈ ವೇಳೆ, ಬೇಸಿಗೆಯ ಬಿಸಿಲಿನಲ್ಲಿ ಗಿಡಗಳಿಗೆ ನೀರು ಎಲ್ಲಿಂದ ಹಾಯಿಸುತ್ತೀರಿ ಎಂಬ ಹಾಲಪ್ಪ ಅವರ ಪ್ರಶ್ನೆಗೆ, ಅಧಿಕಾರಿಯು ಉಡಾಫೆಯಿಂದ ಹಾಗೂ ಏರು ಧ್ವನಿಯಲ್ಲಿ ಉತ್ತರಿಸಿದ್ದಾರೆ ಎಂದು ಮಾಜಿ ಸಚಿವರು ಆರೋಪಿಸಿದರು. ಒಬ್ಬ ಮಾಜಿ ಸಚಿವರಿಗೇ ಈ ರೀತಿಯ ವರ್ತನೆ ತೋರುವ ಅಧಿಕಾರಿಗಳು ಸಾಮಾನ್ಯ ಜನರನ್ನು ಹೇಗೆ ನಡೆಸಿಕೊಳ್ಳಬಹುದು ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಪೊಲೀಸರಿಂದ ಸಂಧಾನ:

ಸನ್ನಿವೇಶ ಗಂಭೀರವಾಗುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಸಿಪಿಐ ಗೌಡಪ್ಪ ಗೌಡರ್, ಅರಣ್ಯ ಇಲಾಖೆಯ ಸಿಬ್ಬಂದಿಯಿಂದ ತಪ್ಪಾಗಿದೆ ಎಂದು ಒಪ್ಪಿಕೊಂಡು, ಅಧಿಕಾರಿಗಳೊಂದಿಗೆ ಸಂಧಾನ ನಡೆಸಿ ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದರು.

ಈ ಧರಣಿಯಲ್ಲಿ ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಎನ್. ಸತೀಶ್, ಗಣಪತಿ ಬಿಳಗೋಡು, ಎಂ.ಎನ್. ಸುಧಾಕರ್, ಉಮೇಶ್ ಕಂಚುಗಾರ್, ಬಿ. ಯುವರಾಜ್, ಸತ್ಯನಾರಾಯಣ ಸೇರಿದಂತೆ ಹಲವು ಸ್ಥಳೀಯ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]