ಸಾಗರ

“ಸಿಗಂದೂರು ದೇವಿ ಮೇಲೆ ಆಣೆ ಮಾಡಲು ಸಿದ್ಧ!” – ಹಸಿರುಮಕ್ಕಿ ಸೇತುವೆ ವಿಚಾರದಲ್ಲಿ ಶಾಸಕ ಬೇಳೂರು ವಿರುದ್ಧ ಸಿಡಿದೆದ್ದ ಹರತಾಳು ಹಾಲಪ್ಪ!

ಬಹುನಿರೀಕ್ಷಿತ ಹಸಿರುಮಕ್ಕಿ ಸೇತುವೆ ಕಾಮಗಾರಿ ವಿಳಂಬವಾಗುತ್ತಿರುವುದಕ್ಕೆ ಹಾಲಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ನಿರ್ಲಕ್ಷ್ಯವೇ ನೇರ ಕಾರಣ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಗಂಭೀರ ಆರೋಪ ಮಾಡಿದ್ದಾರೆ.

Harathalu Halappa Hasirumakki Bridge1

ಸಾಗರ : ತಾಲ್ಲೂಕಿನ ಬಹುನಿರೀಕ್ಷಿತ ಹಸಿರುಮಕ್ಕಿ ಸೇತುವೆ ಕಾಮಗಾರಿ ವಿಳಂಬವಾಗುತ್ತಿರುವುದಕ್ಕೆ ಹಾಲಿ ಶಾಸಕ ಬೇಳೂರು ಗೋಪಾಲಕೃಷ್ಣರ ನಿರ್ಲಕ್ಷ್ಯವೇ ನೇರ ಕಾರಣ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಗಂಭೀರ ಆರೋಪ ಮಾಡಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಹಸಿರುಮಕ್ಕಿ ಸೇತುವೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಶಾಸಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಇತ್ತೀಚೆಗೆ ಲೋಕೋಪಯೋಗಿ ಸಚಿವರು ನೀಡಿದ ಸ್ಪಷ್ಟನೆಯಿಂದಲೇ ಶಾಸಕರು ಹಾಗೂ ಅವರ ಸಲಹೆಗಾರರ ವೈಫಲ್ಯ ಜನರ ಮುಂದೆ ಬಯಲಾಗಿದೆ ಎಂದು ಟೀಕಿಸಿದರು.

ಬಾಕಿ ಬಿಲ್ ಬಿಡುಗಡೆಗೆ ಒತ್ತಾಯ:

“ನನ್ನ ಅಧಿಕಾರಾವಧಿಯಲ್ಲಿ ಸೇತುವೆಯ 27 ಪಿಲ್ಲರ್‌ಗಳ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿತ್ತು. ಆದರೆ, ಬೇಳೂರು ಗೋಪಾಲಕೃಷ್ಣ ಶಾಸಕರಾದ ಬಳಿಕ ಕಟ್ಟಿರುವುದು ಕೇವಲ 4 ಪಿಲ್ಲರ್ ಮಾತ್ರ. ಸರ್ಕಾರದಿಂದ ಗುತ್ತಿಗೆದಾರರಿಗೆ ಬರಬೇಕಾದ ಬಿಲ್ ಬಾಕಿ ಉಳಿದಿದ್ದು, ಹಣ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಗುತ್ತಿಗೆದಾರರು ಕಾಮಗಾರಿಯನ್ನು ವಿಳಂಬ ಮಾಡುತ್ತಿದ್ದಾರೆ. ಶಾಸಕರು ತಕ್ಷಣವೇ ಮುತುವರ್ಜಿ ವಹಿಸಿ ಬಾಕಿ ಹಣ ಬಿಡುಗಡೆ ಮಾಡಿಸಬೇಕು ಮತ್ತು ಶೀಘ್ರವೇ ಸೇತುವೆಯನ್ನು ಸಾರ್ವಜನಿಕರ ಬಳಕೆಗೆ ಲೋಕಾರ್ಪಣೆಗೊಳಿಸಬೇಕು” ಎಂದು ಹಾಲಪ್ಪ ಆಗ್ರಹಿಸಿದರು.

ಆಣೆ ಮಾಡಲು ಸಿದ್ಧ:

ಸೇತುವೆ ಕಾಮಗಾರಿಗೆ ತಾವು ಅಡ್ಡಿಪಡಿಸುತ್ತಿರುವುದಾಗಿ ಕೇಳಿಬರುತ್ತಿರುವ ಆರೋಪಗಳನ್ನು ತಳ್ಳಿಹಾಕಿದ ಹಾಲಪ್ಪ, “ನಾನು ಈ ಕಾಮಗಾರಿಗೆ ಎಂದಿಗೂ ಅಡ್ಡಿಪಡಿಸಿಲ್ಲ. ಈ ವಿಚಾರದಲ್ಲಿ ತಾಯಿ ಸಿಗಂದೂರು ಚೌಡೇಶ್ವರಿ ದೇವಿ ಮೇಲೆ ಆಣೆ ಮಾಡಲು ಸಿದ್ಧನಿದ್ದೇನೆ” ಎಂದು ಸವಾಲು ಹಾಕಿದರು.

ಇದೇ ವೇಳೆ ಶಾಸಕರ ಕಾರ್ಯವೈಖರಿಯನ್ನು ಟೀಕಿಸಿದ ಅವರು, “ಹಿಂದೆ ಬೇಳೂರು ಗೋಪಾಲಕೃಷ್ಣ ಅವರಿಗೆ ನಾನೇ ಟಿಕೆಟ್ ಕೊಡಿಸಿದ್ದೆ. ಆದರೆ ಇಂದು ಅವರೇ ಸಾಗರ ಕ್ಷೇತ್ರಕ್ಕೆ ಉಪದ್ರವಕಾರಿಯಾಗಿ ಪರಿಣಮಿಸಿದ್ದಾರೆ. ಶಾಸಕ ಬೇಳೂರಿಗೆ ಅಭಿವೃದ್ಧಿಯ ಗಂಧ-ಗಾಳಿಯೂ ಗೊತ್ತಿಲ್ಲ, ಅವರಿಗೆ ಮಾರ್ಗದರ್ಶನ ನೀಡಲು ಸರಿಯಾದ ಸಲಹೆಗಾರರೂ ಇಲ್ಲ” ಎಂದು ವ್ಯಂಗ್ಯವಾಡಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

error: Content is protected !!