ಸಾಗರ: ಸಾಗರ ತಾಲ್ಲೂಕಿನ ಹಸಿರುಮಕ್ಕಿ ಸೇತುವೆ ನಿರ್ಮಾಣದಿಂದ ಈ ಭಾಗದ ಜನರ ಬಹುಕಾಲದ ಕನಸು ಈಡೇರಿಸುತ್ತಿದೆ. ಈ ಯೋಜನೆಯ ಶೇ.80ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು, ಮೇ 2026ರೊಳಗೆ ಸೇತುವೆ ಲೋಕಾರ್ಪಣೆಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಶುಕ್ರವಾರ ಅವರು ಸಾಗರ ತಾಲ್ಲೂಕಿನ ಹಸಿರುಮಕ್ಕಿಯಲ್ಲಿ ನಡೆಯುತ್ತಿರುವ ಸೇತುವೆ ಕಾಮಗಾರಿಯನ್ನು ವೀಕ್ಷಿಸಿ, ಮಾಧ್ಯಮಗಳೊಂದಿಗೆ ಮಾತನಾಡಿದರು.
₹125.67 ಕೋಟಿ ಮೊತ್ತದ ಬೃಹತ್ ಯೋಜನೆ
▪️ ಹಸಿರುಮಕ್ಕಿ ಸೇತುವೆ ಕಾಮಗಾರಿಗೆ ₹125.67 ಕೋಟಿ ಅನುದಾನ
▪️ 1.115 ಕಿ.ಮೀ ರಸ್ತೆಯೊಂದಿಗೆ ಸೇತುವೆ ನಿರ್ಮಾಣ
▪️ ಹಸಿರುಮಕ್ಕಿ ಕಡೆ 345 ಮೀ. ಮತ್ತು ಕೊಲ್ಲೂರು ಕಡೆ 165 ಮೀ. ಕಾಮಗಾರಿ
▪️ 8.50 ಮೀ ಅಗಲದ ದ್ವಿಪಥ ಸೇತುವೆ
▪️ 34 ತಳಪಾಯಗಳ ನಿರ್ಮಾಣ
▪️ ಇನ್ನೂ ₹25 ಕೋಟಿ ಬಿಡುಗಡೆ ಬಾಕಿ ಎಂದು ಸಚಿವರು ತಿಳಿಸಿದ್ದಾರೆ.
ಕ್ಷಿಪ್ರಗತಿಯಲ್ಲಿ ಕಾಮಗಾರಿ: ಗುಣಮಟ್ಟದ ಮೇಲ್ವಿಚಾರಣೆ
“ನಮ್ಮ ಸರ್ಕಾರ ಬಂದ ನಂತರ ಕಾಮಗಾರಿ ವೇಗವಾಗಿ ಸಾಗುತ್ತಿದೆ. ಹಣದ ಕೊರತೆ ಇಲ್ಲ. ಜನತೆಗೆ ಲಾಭವಾಗುವ ರೀತಿಯಲ್ಲಿ ಗುಣಮಟ್ಟದ ಕೆಲಸ ನಡೆಯುತ್ತಿದೆ,” ಎಂದು ಸಚಿವರು ಹೇಳಿದರು. ಸಾರ್ವಜನಿಕರ ಉಪಯೋಗಕ್ಕೆ ಸೇತುವೆ ಶೀಘ್ರದಲ್ಲೇ ಲಭ್ಯವಾಗಲಿದೆ ಎಂದರು.
Read More : ಮಲೆನಾಡಿನಲ್ಲಿ ನಿಲ್ಲದ ವರುಣನ ಆರ್ಭಟ ; ಹೊಸನಗರದ ಮಾಸ್ತಿಕಟ್ಟೆಯಲ್ಲಿ ಅತ್ಯಧಿಕ 13 ಸೆಂ.ಮೀ. ಮಳೆ ದಾಖಲು
ಅವರು MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 2019ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಅವರು ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ. ಅವರು ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.