ಹೊಸನಗರ : ತಾಲೂಕಿನ ನಿಟ್ಟೂರು ಕಾಂಗ್ರೆಸ್ ಘಟಕದ ಕಾರ್ಯಕರ್ತರ ಸಭೆಯನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಉದ್ಘಾಟಿಸಿದರು.
ಈ ವೇಳೆ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಸತೀಶ್ ಭಟ್ ಮತ್ತು ರಾಮಪ್ಪ ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಶಾಸಕ ಗೋಪಾಲಕೃಷ್ಣ ಬೇಳೂರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಈ ಭಾಗದ ಅಭಿವೃದ್ಧಿಗೆ 6 ಕೋಟಿ ರೂ. ಅನುದಾನ ನೀಡಿದ್ದು, ದೇವಸ್ಥಾನದ ಅಭಿವೃದ್ಧಿಗೆ ಅಗತ್ಯ ಅನುದಾನ ಕೂಡ ಬಿಡುಗಡೆಯಾಗಿದೆ. ರಸ್ತೆ ಅಭಿವೃದ್ಧಿಗಾಗಿ 3 ಕೋಟಿ ರೂ. ಅನುದಾನ ನೀಡಲಾಗಿದೆ.
ನಿಟ್ಟೂರು- ಹಸಿರುಮಕ್ಕಿ ಸಂಪರ್ಕ ನೂತನ ಸೇತುವೆ ನಿರ್ಮಾಣ ಕಾಮಗಾರಿ ಅಂತಿಮ ಹಂತ ತಲುಪಿದ್ದು 2026ರ ಏಪ್ರಿಲ್ ಅಂತ್ಯಕ್ಕೆ ರಾಜ್ಯದ ಮುಖ್ಯಮಂತ್ರಿಗಳಿಂದ ಲೋಕಾರ್ಪಣೆಗೊಳ್ಳುವ ಆಶಯ ವ್ಯಕ್ತಪಡಿಸಿದರು.
2024-25ನೇ ಸಾಲಿನ ರೈತರ ಬೆಳೆ ವಿಮೆ ಪರಿಹಾರದಲ್ಲಿ ಆಗಿರುವ ತಾರತಮ್ಯ ಕುರಿತು ಚಳಿಗಾಲದ ಅಧಿವೇಶದಲ್ಲಿ ಚರ್ಚೆ ನಡೆಸುವ ಭರವಸೆ ವ್ಯಕ್ತಪಡಿಸಿದ ಅವರು, ಪಕ್ಷದ ಸಿದ್ದಾಂತ ಒಪ್ಪಿ ಕಾಂಗ್ರೆಸ್ ಸೇರ್ಪಡೆಗೊಂಡ ವಿವಿಧ ಪಕ್ಷಗಳ ಮುಖಂಡರಿಗೆ ಅಭಿನಂದನೆ ಸಲ್ಲಿಸಿದರು.
ಕಾರ್ಯಕರ್ತರು ಧೈರ್ಯದಿಂದ ಪಕ್ಷದೊಂದಿಗೆ ಕೈ ಜೋಡಿಸಬೇಕು. ನಿಮ್ಮೊಂದಿಗೆ ನಾನಿದ್ದೇನೆ. ನನ್ನ ಮನೆಯ ಬಾಗಿಲು ಪಕ್ಷ ಕಾರ್ಯಕರ್ತರಿಗೆ ಸದಾ ತೆರೆದಿರುತ್ತದೆ. ನಿಮ್ಮ ಸಂಕಷ್ಟದಲ್ಲಿ ನಾನು ಸದಾ ಭಾಗಿಯಾಗುತ್ತೇನೆ. ಕಾರ್ಯಕರ್ತರು ಯಾವುದೇ ಸಮಯದಲ್ಲೂ ನನಗೆ ಕರೆ ಮಾಡಿದರೂ ನಿಮ್ಮ ಕರೆಯನ್ನು ಸ್ವೀಕರಿಸುತ್ತೇನೆ. ನಿಮ್ಮೊಂದಿಗೆ ನಾನಿದ್ದೇನೆ. ಪಕ್ಷವನ್ನು ಬೂತ್ ಮಟ್ಟದಲ್ಲಿ ಸಂಘಟಿಸಲು ಕಾರ್ಯಕರ್ತರಿಗೆ ಶಾಸಕ ಬೇಳೂರು ಕರೆ ನೀಡಿದರು.
ನಿಟ್ಟೂರು ಕಾಂಗ್ರೆಸ್ ಘಟಕದ ಅಧ್ಯಕ್ಷ ನಾಗೇಂದ್ರ ಜೋಗಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಾಸಕರು ನಿಟ್ಟೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸಮಗ್ರ ಅಭಿವೃದ್ಧಿ ಹಿಂದೆಂದೂ ಕಾಣದಷ್ಟು ಅನುದಾನ ನೀಡಿದ್ದಾರೆ. ಯಾವೊಬ್ಬ ಪಕ್ಷದ ಕಾರ್ಯಕರ್ತ ಕಷ್ಟ ಎಂದು ಮನೆ ಬಾಗಿಲಿಗೆ ಹೋದಲ್ಲಿ ಶಾಸಕರು ಸೂಕ್ತವಾಗಿ ಸ್ಪಂದಿಸುತ್ತಿದ್ದಾರೆ ಎಂಬ ಇಂಗಿತ ವ್ಯಕ್ತಪಡಿಸಿದರು
ಇದೇ ಸಂದರ್ಭದಲ್ಲಿ ನಿಟ್ಟೂರು ಘಟಕದ ವತಿಯಿಂದ ಶಾಸಕರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.

ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಾಸ್ತಿಕಟ್ಟೆ ಸುಬ್ರಹ್ಮಣ್ಯ, ತಾಲೂಕು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ನಾಗೋಡಿ ವಿಶ್ವನಾಥ್, ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸದಾಶಿವ ಶೆಟ್ಟಿ, ಕಾರ್ಯದರ್ಶಿ ಚಂದಯ್ಯ ಜೈನ್, ಪ್ರಮುಖರಾದ ಕೂಡ್ಲುಕೊಪ್ಪ ಸುರೇಶ್ , ಘಟಕದ ಪ್ರಧಾನ ಕಾರ್ಯದರ್ಶಿ ಗಣಪತಿ ಜಾಲ, ಕಾರ್ಯಧ್ಯಕ್ಷ ರವೀಂದ್ರ ಚೆನ್ನಪ್ಪ ಮತ್ತು ಮಂಜಪ್ಪ ಬೆನ್ನಟ್ಟೆ, ಗ್ರಾಮ ಪಂಚಾಯತ್ ಸದಸ್ಯೆ ಶೋಭಾ ಉದಯ್, ರಾಘವಾಚಾರ್ ಕೆ.ಬಿ. ಸರ್ಕಲ್, ಪರಮೇಶ್ವರ ಕೂಡ್ಲುಕೊಪ್ಪ, ಕೊಲ್ಲಪ್ಪ ಕರ್ಕಮಡಿ, ಗಣಪತಿ ಗುರುಟೆ, ನಿಟ್ಟೂರು ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಮಂಜುನಾಥ್ ಶೆಟ್ಟಿ, ಪಿ.ಆರ್. ನಾಗರಾಜ್, ಜೆ.ವಿ ಸುಬ್ರಹ್ಮಣ್ಯ, ರವೀಶ್ ಕುಮಾರ್ ನಿಟ್ಟೂರ್, ಗುರುಮೂರ್ತಿ ಬೆನ್ನಟ್ಟೆ, ವಾಸುಭಟ್ ಹೆಬ್ಬಿಗೆ ಇನ್ನಿತರರು ಉಪಸ್ಥಿತರಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





