ಶಿವಮೊಗ್ಗ

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಹೆಚ್.ಸಿ. ಯೋಗೇಶ್ ನೇಮಕ

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಹೆಚ್.ಸಿ. ಯೋಗೇಶ್ ಅವರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ ನೇಮಕ ಮಾಡಿದೆ. ಕಾಂಗ್ರೆಸ್ ಅಧ್ಯಕ್ಷರ ಅನುಮೋದನೆಯೊಂದಿಗೆ ಈ ನೇಮಕಾತಿ ತಕ್ಷಣದಿಂದಲೇ ಜಾರಿಗೆ ಬರಲಿದೆ.

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಹೆಚ್.ಸಿ. ಯೋಗೇಶ್ ನೇಮಕ – malnadtimes hc yogesh

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಹೆಚ್.ಸಿ. ಯೋಗೇಶ್ ಅವರನ್ನು ನೇಮಕ ಮಾಡಲಾಗಿದೆ.

WhatsApp Group Join Now
Telegram Group Join Now
Instagram Group Join Now

ಅಖಿಲ ಭಾರತ ಕಾಂಗ್ರೆಸ್ ಸಮಿತಿ ಈ ನೇಮಕಾತಿ ಮಾಡಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಸೆಪ್ಟೆಂಬರ್ 9ರಂದು ಬಿಡುಗಡೆ ಮಾಡಿದ ಅಧಿಕೃತ ಪಟ್ಟಿಯಲ್ಲಿ ಹೆಚ್.ಸಿ. ಯೋಗೇಶ್ ಅವರ ಹೆಸರನ್ನು ಪ್ರಕಟಿಸಲಾಗಿದೆ.

ಕಾಂಗ್ರೆಸ್ ಅಧ್ಯಕ್ಷರ ಅನುಮೋದನೆಯೊಂದಿಗೆ ಈ ನೇಮಕಾತಿ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ತಿಳಿಸಲಾಗಿದೆ.

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಈ ಬಾರಿ ಹಲವು ಮುಖಂಡರ ಹೆಸರುಗಳು ಚರ್ಚೆಯಲ್ಲಿದ್ದವು. ಪಕ್ಷದ ವೀಕ್ಷಕರು ಜಿಲ್ಲೆಯಲ್ಲಿ ಮುಖಂಡರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ವರದಿ ಸಲ್ಲಿಸಿದ್ದರು.

ಆ ವರದಿ ಹಾಗೂ ಪಕ್ಷದ ಹಿರಿಯ ನಾಯಕರ ಸಮಾಲೋಚನೆಯ ನಂತರ ಹೆಚ್.ಸಿ. ಯೋಗೇಶ್ ಅವರನ್ನು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.

ಮುಂದಿನ ದಿನಗಳಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಘಟನೆಯನ್ನು ಬಲಪಡಿಸುವುದು, ಕಾರ್ಯಕರ್ತರನ್ನು ಒಗ್ಗೂಡಿಸುವುದು ಮತ್ತು ಪಕ್ಷದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿ ನೂತನ ಅಧ್ಯಕ್ಷರ ಮೇಲಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Koushik Kaapi

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.

Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650

ವೆಬ್‌ಸೈಟ್

error: Content is protected !!