ರಿಪ್ಪನ್‌ಪೇಟೆ ; ಖಾಸಗಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶಿವಮೊಗ್ಗ ರಸ್ತೆಯ ಮೂಲಕ ಶಿವಗಂಗಾ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಗಾಯಾಳುವನ್ನು ಕೆಂಚನಾಲ ಸಮೀಪದ ಕಮದೂರು ಗ್ರಾಮದ ನಾಗರಾಜ್ ನಾಯ್ಕ್ (47) ಎಂದು ಗುರುತಿಸಲಾಗಿದೆ. ಇವರು ಅರಣ್ಯ ಇಲಾಖೆಯಲ್ಲಿ ವಾಚರ್ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.
ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತ್ತಿದ್ದ ದುರ್ಗಾಂಬ ಬಸ್‌ಗೆ ಬೈಕ್ ಡಿಕ್ಕಿಯಾಗಿದ್ದು ಈ ಘಟನೆಯಲ್ಲಿ ಬೈಕ್ ಸವಾರನ ತಲೆಗೆ ಗಂಭೀರವಾದ ಗಾಯವಾಗಿ ತೀವ್ರ ರಕ್ತಸ್ರಾವವಾಗಿದೆ. ತಕ್ಷಣ ಗಾಯಾಳುವನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನಿಸಲಾಗಿದೆ.
ಘಟನಾ ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ರಾಜುರೆಡ್ಡಿ ಹಾಗೂ ಸಿಬ್ಬಂದಿಗಳು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.