Accident

ರಿಪ್ಪನ್‌ಪೇಟೆ ; ಎರಡು ಕಾರುಗಳ ನಡುವೆ ಅಪಘಾತ – ಮಕ್ಕಳು ಸೇರಿ ಹಲವರಿಗೆ ಗಾಯ !

ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಬೆಳಂಬೆಳಿಗ್ಗೆ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಶಿರಸಿಯಿಂದ ಕಾರ್ಕಳಕ್ಕೆ ತೆರುಳುತ್ತಿದ್ದ ಹ್ಯೂಂಡೈ ಕಾರು ಮತ್ತು ಹೊಸನಗರ ರಸ್ತೆಯಿಂದ ಶಿವಮೊಗ್ಗ ರಸ್ತೆ ಕಡೆ ತೆರುಳುತ್ತಿದ್ದ ಮಾರುತಿ ಆಲ್ಟೋ ಕಾರುಗಳ ನಡುವೆ ಈ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಎರಡು ಕಾರುಗಳು ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು ಅಪಘಾತದ ಭೀಕರತೆಗೆ ರಸ್ತೆ ಪಕ್ಕ ನಿಂತಿದ್ದ ಒಂದು ಬೈಕ್ ಸಹ ಹಾನಿಗೊಂಡಿದೆ‌.

ಅಪಘಾತಕ್ಕೀಡಾದ ಮಾರುತಿ ಆಲ್ಟೋ ಕಾರು ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿಂಡ್ಲೆಮನೆ ನಿವಾಸಿಗಳದ್ದಾಗಿದ್ದು, ಐ20 ಕಾರು ಶಿರಸಿ ಮೂಲದವರದ್ದು ಎನ್ನಲಾಗಿದೆ.

ಘಟನೆ ನಡೆದ ಕೂಡಲೇ ಸ್ಥಳೀಯರು ಧಾವಿಸಿ ಗಾಯಾಳುಗಳನ್ನು ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ಕರೆದೊಯ್ದಿದಿದ್ದು ಪ್ರಥಮ ಚಿಕಿತ್ಸೆಯ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.

ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!