ಕೊಪ್ಪ ; ಮಲೆನಾಡಿನಾದ್ಯಂತ ಭಾರಿ ಮಳೆ ಮುಂದುವರೆದಿದ್ದು ಭಾರೀ ಗಾಳಿ ಮಳೆಗೆ ಆಟೋ ಮೇಲೆ ಮರ ಮುರಿದುಬಿದ್ದು, ಚಾಲಕ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಭೈರೇದೇವರು ಗ್ರಾಮದಲ್ಲಿ ನಡೆದಿದೆ.
ಮೃತ ಆಟೋ ಚಾಲಕನನ್ನು ರತ್ನಾಕರ್ ಎಂದು ಗುರುತಿಸಲಾಗಿದೆ. ಭಾರೀ ಗಾಳಿ ಮಳೆಗೆ ಮರ ಆಟೋ ಮೇಲೆ ಬಿದ್ದಿದೆ, ಪರಿಣಾಮ ಆಟೋ ಜಖಂ ಆಗಿದೆ. ಅದರಲ್ಲಿ ಸಿಲುಕಿ ಚಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ ಎಂದು ತಿಳಿದು ಬಂದಿದೆ.
ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದರಿಂದ ಜಿಲ್ಲೆಯಲ್ಲಿ ಮಹಾಮಳೆಗೆ ಮೂರನೇ ಬಲಿಯಾದಂತಾಗಿದೆ. ಜಿಲ್ಲೆಯ ಮಲೆನಾಡು ಭಾಗದಲ್ಲಿ ಗಾಳಿ ಮಳೆಯ ಅಬ್ಬರ ಮುಂದುವರೆದಿದ್ದು, ನಾಳೆಯೂ ಸಹ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

